ಕ್ರಿಮಿನಲ್ ಗಳಿಗೆ ಟಿಕೆಟ್ ಸಿಗುತ್ತಿರಬೇಕಾದರೇ ನನಗೇಕಿಲ್ಲ: ಪಣಜಿ ಕ್ಷೇತ್ರದ ಟಿಕೆಟ್ ಪಡೆಯಲು ಪರಿಕ್ಕರ್ ಪುತ್ರನ ಹೆಣಗಾಟ!
ಗೋವಾ ವಿಧಾನಸಭೆ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಟಿಕೆಟ್ ಪಡೆಯಲು ಮಾಜಿ ಸಿಎಂ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ.
Published: 17th January 2022 01:39 PM | Last Updated: 17th January 2022 01:39 PM | A+A A-

ಉತ್ಪಲ್ ಪರಿಕ್ಕರ್
ಮುಂಬಯಿ: ಗೋವಾ ವಿಧಾನಸಭೆ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಟಿಕೆಟ್ ಪಡೆಯಲು ಮಾಜಿ ಸಿಎಂ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ.
2017 ರಲ್ಲಿ ತಮ್ಮ ತಂದೆ ಸ್ಪರ್ಧಿಸಿದ್ದ ಪಣಜಿ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು, ಕೇಸರಿ ಪಕ್ಷವು ರಾಜ್ಯದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಅಟಾನಾಸಿಯೊ ಬಾಬುಷ್ ಮಾನ್ಸೆರೇಟ್ ಅವರನ್ನು ಕಣಕ್ಕಿಳಿಸಿದೆ. ಆದರೆ ಉತ್ಪಲ್ ಪರಿಕ್ಕರ್ ಪಣಜಿಯಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಉತ್ಪಲ್ ಪರಿಕ್ಕರ್ ಬಿಜೆಪಿಯ ದೊಡ್ಡ ನಾಯಕರ ಮಗನಾಗಿರುವುದರಿಂದ ಟಿಕೆಟ್ ಸಿಗುವುದು ಕಷ್ಟ ಎಂದು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ, ಕ್ರಿಮಿನಲ್ ಹಿನ್ನೆಲೆ ಇರುವವರು ಟಿಕೆಟ್ ಪಡೆಯುತ್ತಿದ್ದಾರೆ ನನಗೇಕೆ ಸಿಗುವುದಿಲ್ಲ ಎಂದು ಪ್ರಶ್ನಿಸಿದ್ದಾರೆ, ಆದರೆ ಬಿಜೆಪಿ ನಾಯಕರು ಮಾನ್ಸರೇಟ್ ಅವರನ್ನು ಪರಿಗಣಿಸುತ್ತಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.