50 ಲಕ್ಷಕ್ಕೂ ಅಧಿಕ ಆರೋಗ್ಯ, ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಿಕೆ: ಮನ್ಸುಖ್ ಮಾಂಡವೀಯಾ
ಜನವರಿ 10 ರಿಂದ ಈವರೆಗೂ ಸುಮಾರು 50 ಲಕ್ಷ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ, ಅದಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕೆಯ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಮಂಗಳವಾರ ತಿಳಿಸಿದ್ದಾರೆ.
Published: 18th January 2022 03:23 PM | Last Updated: 18th January 2022 06:30 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಜನವರಿ 10 ರಿಂದ ಈವರೆಗೂ ಸುಮಾರು 50 ಲಕ್ಷ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ, ಅದಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕೆಯ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಮಂಗಳವಾರ ತಿಳಿಸಿದ್ದಾರೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಸುಮಾರು 80 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ತಾತ್ಕಾಲಿಕ ವರದಿಗಳ ಪ್ರಕಾರ ಬೆಳಗ್ಗೆ 7 ಗಂಟೆಯವರೆಗೆ ದೇಶದಲ್ಲಿ ನೀಡಲಾದ ಕೋವಿಡ್-19 ಲಸಿಕೆ ಪ್ರಮಾಣವು 158.04 ಕೋಟಿ ಮೀರಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ: ಲಾಕ್ಡೌನ್ ಚಿಂತನೆ ಇಲ್ಲ ಎಂದ ಸಿಎಂ ಬೊಮ್ಮಾಯಿ
ಜನವರಿ 10 ರಿಂದ 50 ಲಕ್ಷಕ್ಕೂ ಹೆಚ್ಚು ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರು ಮತ್ತು 60 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ನಾಗರಿಕರು ಮುನ್ನೆಚ್ಚರಿಕೆ ಡೋಸ್ ಅನ್ನು ಸ್ವೀಕರಿಸಿದ್ದಾರೆ. ಇದು ಮತ್ತೊಂದು ಮೈಲಿಗಲ್ಲು ಆಗಿದೆ. ಅರ್ಹರಾಗಿರುವ ಎಲ್ಲರೂ ತಮ್ಮ ಮುನ್ನೆಚ್ಚರಿಕೆ ಲಸಿಕೆಯನ್ನು ಶೀಘ್ರವಾಗಿ ಪಡೆಯಲು ವಿನಂತಿಸುವುದಾಗಿ ಮಾಂಡವೀಯಾ ಟ್ವೀಟ್ ಮಾಡಿದ್ದಾರೆ.
Another Day, Another Milestone
— Dr Mansukh Mandaviya (@mansukhmandviya) January 18, 2022
Over 5️⃣0️⃣ lakh healthcare & frontline workers & citizens aged 60 years or above have received Precaution Dose, since 10th January.
I request all those who are eligible to get their Precaution Dose at the earliest.#SabkoVaccineMuftVaccine pic.twitter.com/XI2pWTrRWM
ದೇಶದಲ್ಲಿ ಓಮಿಕ್ರಾನ್ ಸೋಂಕಿನ ಹೆಚ್ಚಳದ ನಡುವೆ ಜನವರಿ 10 ರಿಂದ ಆರೋಗ್ಯ, ಮುಂಚೂಣಿ ಕಾರ್ಯಕರ್ತರು, 60 ವರ್ಷ ಹಾಗೂ ಅದಕ್ಕೂ ಮೇಲ್ಪಟ್ಟಿನ ಸಹ ಅಸ್ವಸ್ಥತೆ ಹೊಂದಿರುವವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಿಕೆಯನ್ನು ಆರಂಭಿಸಲಾಗಿತ್ತು.