ಗೋವಾ ಚುನಾವಣೆ: ಬಿಜೆಪಿಯಿಂದ 34 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಪರಿಕ್ಕರ್ ಪುತ್ರನಿಗಿಲ್ಲ ಟಿಕೆಟ್
ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ಗುರುವಾರ 34 ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದೆ.
Published: 20th January 2022 07:26 PM | Last Updated: 20th January 2022 07:26 PM | A+A A-

ಉತ್ಪಲ್ ಪರಿಕ್ಕರ್
ಪಣಜಿ: ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ಗುರುವಾರ 34 ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದೆ.
ಗೋವಾ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರ ಹೆಸರು ಪಟ್ಟಿಯಲ್ಲಿಲ್ಲ. ಪಣಜಿಯಿಂದ ಉತ್ಪಲ್ ಪರಿಕ್ಕರ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ, ಹಾಲಿ ಶಾಸಕ ಅಟಾನಾಸಿಯೊ ಮಾನ್ಸೆರೇಟ್ ಅವರಿಗೆ ಟಿಕೆಟ್ ನೀಡಿದೆ.
ಇದನ್ನು ಓದಿ: ಗೋವಾ ಚುನಾವಣೆ: ಮನೋಹರ್ ಪರಿಕ್ಕರ್ ಪುತ್ರನಿಗೆ ಟಿಕೆಟ್ ಆಫರ್ ನೀಡಿದ ಕೇಜ್ರಿವಾಲ್!
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸ್ಯಾಂಕ್ವೆಲಿಮ್ ನಿಂದ ಸ್ಪರ್ಧಿಸಲಿದ್ದು, ಉಪ ಮುಖ್ಯಮಂತ್ರಿ ಮನೋಹರ್ ಅಜಗಾಂವ್ಕರ್ ಮಾರ್ಗಾಂವ್ ನಿಂದ ಸ್ಪರ್ಧಿಸಲಿದ್ದಾರೆ.
ಪಣಜಿಯಿಂದ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದ್ದು, ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರಿಗೆ ಇತರ ಪರ್ಯಾಯಗಳನ್ನು ನೀಡಲಾಯಿತು. ಆದರೆ ಅವರು ನಿರಾಕರಿಸಿದರು ಎಂದು ಗೋವಾ ಬಿಜೆಪಿ ಉಸ್ತುವಾರಿ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಗೋವಾ ವಿಧಾನಸಭೆಗೆ ಫೆಬ್ರವರಿ 14 ರಂದು ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.