ಉದ್ಯೋಗ ಸಂಸ್ಥೆ ಕಿರುಕುಳ: ಸುಪ್ರೀಂ ಕೋರ್ಟ್ ಆವರಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಾಜಬಾಬು ಗುಪ್ತಾ ಎಂದು ಗುರುತಿಸಲಾಗಿದೆ. ಅವರು ನೋಯ್ಡಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.
Published: 21st January 2022 07:18 PM | Last Updated: 21st January 2022 07:18 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಸುಪ್ರೀಂ ಕೋರ್ಟ್ನ ಹೊರಗೆ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ಕೋಪದ ಭರದಲ್ಲಿ ಬ್ಯಾಟ್ನಿಂದ ಹೊಡೆದು ಪತ್ನಿಯನ್ನು ಕೊಂದು, ಪುತ್ರರ ಕತ್ತು ಹಿಸುಕಿ ಕೊಲೆಗೈದು ನೇಣಿಗೆ ಶರಣಾದ ವ್ಯಕ್ತಿ!
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಾಜಬಾಬು ಗುಪ್ತಾ ಎಂದು ಗುರುತಿಸಲಾಗಿದೆ, ಅವರು ನೋಯ್ಡಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ರಾಜಬಾಬು ಅವರನ್ನು ತಕ್ಷಣವೇ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ತಮಿಳುನಾಡು: ನೀಟ್ ಪರೀಕ್ಷೆಯಲ್ಲಿ ಅನುತೀರ್ಣ, ಮನನೊಂದು ಯುವತಿ ಆತ್ಮಹತ್ಯೆಗೆ ಶರಣು
ಕಳೆದ ಮೂರು ತಿಂಗಳಿಂದ ಕಾರ್ಖಾನೆಯ ಆಡಳಿತ ಮಂಡಳಿಯು ಸಂಬಳ ನೀಡಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಜಾಲಿ ಮೂಡ್ ನಲ್ಲಿ ಬೋಟಿಂಗ್ ಮಾಡುತ್ತಿದ್ದ ಬೋಟ್ ಗಳ ಮೇಲೆ ಬಿದ್ದ ಬೃಹತ್ ಬಂಡೆ, 7 ಸಾವು, 20 ಮಂದಿ ನಾಪತ್ತೆ