5 ವರ್ಷದ ಮಕ್ಕಳಿಗೆ ಮಾಸ್ಕ್ ಕಡ್ಡಾಯವಿಲ್ಲ: ಸೋಂಕಿನ ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನವರಿಗೆ ಆ್ಯಂಟಿಬಾಡಿ ಔಷಧ ಬೇಡ
ಕೋವಿಡ್ ಸೋಂಕಿನ ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ಪ್ರತಿಕಾಯ ಸೃಷ್ಟಿಗೆ ಪೂರಕವಾದ ಆ್ಯಂಟಿಬಾಡಿ ಔಷಧಗಳನ್ನು ಬಳಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ.
Published: 21st January 2022 12:05 PM | Last Updated: 21st January 2022 01:33 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಕೋವಿಡ್ ಸೋಂಕಿನ ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ಪ್ರತಿಕಾಯ ಸೃಷ್ಟಿಗೆ ಪೂರಕವಾದ ಆ್ಯಂಟಿಬಾಡಿ ಔಷಧಗಳನ್ನು ಬಳಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಮಕ್ಕಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೋವಿಡ್ ಮಾಗ ಸೂಚಿಯನ್ನು ಹೊರಡಿಸಿದ್ದು, 5 ವರ್ಷ ಕ್ಕಿಂತ ಕೆಳಗಿನ ಮಕ್ಕಳಿಗೆ ಮಾಸ್ಕ್ ಅಗತ್ಯವಿಲ್ಲ. 6ರಿಂದ 11 ವರ್ಷದ ಮಕ್ಕಳಿಗೆ ಅವರ ಸಾಮರ್ಥ್ಯಕ್ಕೆ ಪಾಲಕರು ನಿಗಾದಲ್ಲಿ ಮಾಸ್ಕ್ ಹಾಕಬೇಕು. 12ರಿಂದ 18ವಷದ ಮಕ್ಕಳು ದೊಡ್ಡವರಂತೆ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದೆ.
ಕೊರೋನಾ, ಓಮಿಕ್ರಾನ್ ಸೋಂಕು ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ರೋಗ ನಿರೋಧಕ ಸೃಷ್ಟಿಗೆ ಪೂರಕವಾದ ಆ್ಯಂಟಿಬಾಡಿ ಔಷಧಗಳನ್ನು ಬಳಸಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ. ಸ್ಟಿರಾಯ್ಡ್ ಅನ್ನು ಬಳಸುವುದಾದರೂ ಅದು 10 ರಿಂದ 14 ದಿನಕ್ಕೆ ಸೀಮಿತವಾಗಿರಬೇಕು ಎಂದು ಹೇಳಿದೆ.
ಇದನ್ನೂ ಓದಿ: 12-14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ: ಸರ್ಕಾರದ ಅಧಿಕೃತ ಮೂಲಗಳು
ಒಮಿಕ್ರಾನ್ ರೂಪಾಂತರ ತಳಿಯ ಕೋವಿಡ್ ಸೋಂಕು ಪ್ರಕರಣ ಏರಿಕೆಯ ಹಿನ್ನೆಲೆಯಲ್ಲಿ ತಜ್ಞರ ಸಮಿತಿಯು ಗುರುವಾರ ಕೋವಿಡ್ಮಾರ್ಗಸೂಚಿಗಳನ್ನು ಪರಿಷ್ಕರಿಸಿತು. ಇತರೆ ದೇಶಗಳಿಗೆ ಸಂಬಂಧಿಸಿದ ಅಂಕಿ ಅಂಶಗಳ ಪ್ರಕಾರ, ಓಮೈಕ್ರಾನ್ ಸೋಂಕಿನ ಪರಿಣಾಮ, ತೀವ್ರತೆ ಕಡಿಮೆ ಆಗಿದೆ. ಆದರೂ, ಪ್ರಸ್ತುತ ಏರಿಕೆ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವುದು
ಅಗತ್ಯವಾಗಿದೆ ಎಂದು ಹೇಳಿದೆ.