ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ಯುವ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್, ಪ್ರಿಯಾಂಕಾ
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಯುವಕರನ್ನು ಗುರಿಯಾಗಿಸಿಕೊಂಡು ಶುಕ್ರವಾರ 'ಭರ್ತಿ ವಿಧಾನ್'(ನೇಮಕಾತಿ ವಿಧಾನ) ಎಂಬ ಯುವ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.
Published: 21st January 2022 03:58 PM | Last Updated: 21st January 2022 03:58 PM | A+A A-

ಪ್ರಿಯಾಂಕಾ - ರಾಹುಲ್
ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಯುವಕರನ್ನು ಗುರಿಯಾಗಿಸಿಕೊಂಡು ಶುಕ್ರವಾರ 'ಭರ್ತಿ ವಿಧಾನ್'(ನೇಮಕಾತಿ ವಿಧಾನ) ಎಂಬ ಯುವ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಾಂಗ್ರೆಸ್ ಯುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪಕ್ಷದಿಂದ ಮಾತ್ರ ರಾಜ್ಯದ ಯುವಕರಿಗೆ ಹೊಸ ದೃಷ್ಟಿಕೋನ ನೀಡಲು ಸಾಧ್ಯ ಎಂದು ಹೇಳಿದ್ದಾರೆ.
ಇದನ್ನು ಓದಿ: ಮಾವ ಮುಲಾಯಂ ಸಿಂಗ್ ಯಾದವ್ ಆಶೀರ್ವಾದ ಕೋರಿದ ಅಪರ್ಣಾ ಯಾದವ್!
ಪತ್ರಿಕಾಗೋಷ್ಠಿಯಲ್ಲಿ 'ಯುವ ಪ್ರಣಾಳಿಕೆ' ಬಿಡುಗಡೆ ಮಾಡಿ ಮಾತನಾಡಿದ ರಾಹುಲ್ ಗಾಂಧಿ, ಈ ವಿಷನ್ ಡಾಕ್ಯುಮೆಂಟ್ ಸುಳ್ಳಿನ ಭರವಸೆ ಅಲ್ಲ. ಯುವಕರನ್ನು ಸಂಪರ್ಕಿಸಿ ಪ್ರಣಾಳಿಕೆ ಸಿದ್ಧಪಡಿಲಾಗಿದೆ ಎಂದು ಹೇಳಿದರು.
"ನಾವು ದ್ವೇಷವನ್ನು ಹರಡುವುದಿಲ್ಲ, ನಾವು ಜನರನ್ನು ಒಗ್ಗೂಡಿಸುತ್ತೇವೆ ಮತ್ತು ನಾವು ಯುವ ಶಕ್ತಿಯೊಂದಿಗೆ ಹೊಸ ಉತ್ತರ ಪ್ರದೇಶವನ್ನು ರಚಿಸಲು ಬಯಸುತ್ತೇವೆ" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ನೇಮಕಾತಿಯೂ ರಾಜ್ಯದ ಅತಿ ದೊಡ್ಡ ಸಮಸ್ಯೆಯಾಗಿದ್ದು, ಇದರಿಂದ ಯುವಕರು ನಿರಾಶೆಗೊಂಡಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹೇಳಿದ್ದಾರೆ.