ಮುಂಬೈನ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: 7 ಮಂದಿ ದುರ್ಮರಣ, 17ಕ್ಕೂ ಹೆಚ್ಚು ಮಂದಿಗೆ ಗಾಯ
ವಾಣಿಜ್ಯ ನಗರಿ ಮುಂಬೈನ ಭಾಟಿಯಾ ಆಸ್ಪತ್ರೆ ಬಳಿ ಇರುವ 20 ಅಂತಸ್ತಿನ ಕಟ್ಟಡದವೊಂದರಲ್ಲಿ ಭಾರೀ ಪ್ರಮಾಣ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 7 ಮಂದಿ ಸಾವನ್ನಪ್ಪಿ 17ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
Published: 22nd January 2022 10:59 AM | Last Updated: 22nd January 2022 11:51 AM | A+A A-

ಅಗ್ನಿ ಅವಘಡ ಸಂಭವಿಸಿರುವ ಕಟ್ಟಡ.
ಮುಂಬೈ: ವಾಣಿಜ್ಯ ನಗರಿ ಮುಂಬೈನ ಭಾಟಿಯಾ ಆಸ್ಪತ್ರೆ ಬಳಿ ಇರುವ 20 ಅಂತಸ್ತಿನ ಕಟ್ಟಡದವೊಂದರಲ್ಲಿ ಭಾರೀ ಪ್ರಮಾಣ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 7 ಮಂದಿ ಸಾವನ್ನಪ್ಪಿ 17ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಕಟ್ಟಡದ 15ನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆ 19ನೇ ಅಂತಸ್ತಿನವರೆಗೂ ಹಬ್ಬಿದೆ. ಇದರ ಪರಿಣಾಮ ಭಾರೀ ಪ್ರಮಾಣ ಹಾನಿಯುಂಟಾಗಿದೆ ಎಂದು ಹೇಳಲಾಗುತ್ತಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ 21 ಅಗ್ನಿಶಾಮಕ ವಾಹನಗಳೊಂದಿಗೆ ದೌಡಾಯಿರುವ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಇದನ್ನೂ ಓದಿ: ಉದ್ಯೋಗ ಸಂಸ್ಥೆ ಕಿರುಕುಳ: ಸುಪ್ರೀಂ ಕೋರ್ಟ್ ಆವರಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ
ದುರ್ಘಟನೆಯಲ್ಲಿ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಗ್ನಿ ಅವಘಡಕ್ಕೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ.
ಗಾಯಾಳುಗಳಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೂ ಮೂವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ಎಂತಿದ್ದುದಾರೆಂದು ತಿಳಿದುಬಂದಿದೆ.
#UPDATE | Seven people have died in the fire incident that broke out in 20 storeys Kamala building near Mumbai’s Bhatia hospital in Tardeo: Brihanmumbai Municipal Corporation (BMC)
— ANI (@ANI) January 22, 2022