ಗೋವಾ ಮಾಜಿ ಸಿಎಂಗೆ ಟಿಕೆಟ್ ನಿರಾಕರಿಸಿದ ಬಿಜೆಪಿ, ಕೇಸರಿ ಪಕ್ಷ ತೊರೆಯಲು ಲಕ್ಷ್ಮೀಕಾಂತ್ ಪರ್ಸೇಕರ್ ನಿರ್ಧಾರ
ಮುಂದಿನ ತಿಂಗಳು ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆಗೆ ಬಿಜೆಪಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಲಕ್ಷ್ಮೀಕಾಂತ್ ಪರ್ಸೇಕರ್ ಅವರಿಗೆ ಟಿಕೆಟ್ ನಿರಾಕರಿಸಿದ್ದು, ಆಡಳಿತ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ...
Published: 22nd January 2022 03:31 PM | Last Updated: 22nd January 2022 03:31 PM | A+A A-

ಲಕ್ಷ್ಮೀಕಾಂತ ಪರ್ಸೇಕರ್
ಪಣಜಿ: ಮುಂದಿನ ತಿಂಗಳು ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆಗೆ ಬಿಜೆಪಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಲಕ್ಷ್ಮೀಕಾಂತ್ ಪರ್ಸೇಕರ್ ಅವರಿಗೆ ಟಿಕೆಟ್ ನಿರಾಕರಿಸಿದ್ದು, ಆಡಳಿತ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಶನಿವಾರ ಮಾಜಿ ಸಿಎಂ ಹೇಳಿದ್ದಾರೆ.
ನನಗೆ ಬಿಜೆಪಿ ಪಕ್ಷದಲ್ಲಿ ಮುಂದುವರೆಯಲು ಇಷ್ಟವಿಲ್ಲ. ಇಂದು ಸಂಜೆಯೊಳಗೆ ಔಪಚಾರಿಕವಾಗಿ ರಾಜೀನಾಮೆ ಸಲ್ಲಿಸಲಿದ್ದೇನೆ ಎಂದು ಗೋವಾ ಮಾಜಿ ಸಿಎಂ ಪರ್ಸೇಕರ್ ಅವರು ಹೇಳಿದ್ದಾರೆ.
ಇದನ್ನು ಓದಿ: ಗೋವಾ ಚುನಾವಣೆ: ಬಿಜೆಪಿ ತೊರೆದ ಉತ್ಪಲ್ ಪರಿಕ್ಕರ್, ಪಣಜಿಯಿಂದಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ
ಪರ್ಸೇಕರ್ ಅವರು ಪ್ರಸ್ತುತ ಮುಂಬರುವ ಗೋವಾ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿದ್ದಾರೆ ಮತ್ತು ಪಕ್ಷದ ಕೋರ್ ಕಮಿಟಿಯ ಸದಸ್ಯರೂ ಆಗಿದ್ದಾರೆ.
2002 ರಿಂದ 2017 ರವರೆಗೆ ಪರ್ಸೇಕರ್ ಪ್ರತಿನಿಧಿಸಿದ್ದ ಮಾಂಡ್ರೆಮ್ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ದಯಾನಂದ್ ಸೋಪ್ಟೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಸೋಪ್ಟೆ 2017 ರಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರ್ಸೇಕರ್ ಅವರನ್ನು ಸೋಲಿಸಿದ್ದರು, ಆದರೆ 2019 ರಲ್ಲಿ ಇತರ ಒಂಬತ್ತು ನಾಯಕರೊಂದಿಗೆ ಆಡಳಿತ ಪಕ್ಷಕ್ಕೆ ಸೇರಿದ್ದರು.
”ಸದ್ಯಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ನಾನು ಮುಂದೆ ಏನು ಮಾಡಬೇಕು ಎಂಬುದನ್ನು ನಂತರ ನಿರ್ಧರಿಸುತ್ತೇನೆ. ಮಾಂಡ್ರೆಮ್ ನಲ್ಲಿ ಸೋಪ್ಟೆ ಅವರು ಮೂಲ ಬಿಜೆಪಿ ಕಾರ್ಯಕರ್ತರನ್ನು ನಿರ್ಲಕ್ಷಿಸುತ್ತಿದ್ದಾರೆ, ಇದರಿಂದಾಗಿ ಅವರಲ್ಲಿ ದೊಡ್ಡ ಪ್ರಮಾಣದ ಅಸಮಾಧಾನವಿದೆ ಎಂದು ಹೇಳಿದರು.
ಪರ್ಸೇಕರ್ ಅವರು 2014 ಮತ್ತು 2017 ರ ನಡುವೆ ಗೋವಾದ ಮುಖ್ಯಮಂತ್ರಿಯಾಗಿದ್ದರು. ಅಂದಿನ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ರಕ್ಷಣಾ ಸಚಿವರಾಗಿ ಕೇಂದ್ರ ಸಂಪುಟಕ್ಕೆ ಸೇರ್ಪಡೆಗೊಂಡ ನಂತರ ಅವರು ರಾಜ್ಯದ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು.
ಫೆಬ್ರವರಿ 14 ರಂದು ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಗೆ ಬಿಜೆಪಿ 34 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯದಲ್ಲಿ ಒಟ್ಟು 40 ಸ್ಥಾನಗಳಿವೆ.