ನಟ ದಿಲೀಪ್ಗೆ ರಿಲೀಫ್: ಜ. 27ರವರೆಗೆ ಬಂಧಿಸದಂತೆ ಕೇರಳ ಹೈಕೋರ್ಟ್ ಆದೇಶ!
ನಟ ದಿಲೀಪ್ ಮೇಲಿನ ಲೈಂಗಿಕ ದೌರ್ಜನ್ಯದ ತನಿಖೆ ನಡೆಸುತ್ತಿರುವ ತನಿಖಾ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ಕೇರಳ ಹೈಕೋರ್ಟ್ ಜನವರಿ 27 ರವರೆಗೆ ಬಂಧಿಸದಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ.
Published: 22nd January 2022 08:51 PM | Last Updated: 22nd January 2022 08:51 PM | A+A A-

ನಟ ದಿಲೀಪ್
ತಿರುವನಂತಪುರಂ: ನಟ ದಿಲೀಪ್ ಮೇಲಿನ ಲೈಂಗಿಕ ದೌರ್ಜನ್ಯದ ತನಿಖೆ ನಡೆಸುತ್ತಿರುವ ತನಿಖಾ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ಕೇರಳ ಹೈಕೋರ್ಟ್ ಜನವರಿ 27 ರವರೆಗೆ ಬಂಧಿಸದಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ.
ನಟ ದಿಲೀಪ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಪೀಠ, ತನಿಖಾಧಿಕಾರಿಗಳ ವಿರುದ್ಧ ಪಿತೂರಿ ರೂಪಿಸುವುದು ಅಪರಾಧಕ್ಕೆ ಸಮಾನ ಎಂದು ಅಭಿಪ್ರಾಯಪಟ್ಟಿದೆ.
ನಟ ದಿಲೀಪ್ ಮೇಲಿನ ಹಲ್ಲೆ ಪ್ರಕರಣದಲ್ಲಿ ತನಿಖಾಧಿಕಾರಿಗಳಿಗೆ ಹಾನಿ ಮಾಡಲು ಸಂಚು ರೂಪಿಸಿರುವ ಪ್ರಕರಣ ಕಪೋಲಕಲ್ಪಿತವಾಗಿದ್ದು, ತನಿಖಾಧಿಕಾರಿಗಳು ಮತ್ತು ಪ್ರಾಸಿಕ್ಯೂಷನ್ ಕಕ್ಷಿದಾರರನ್ನು ಜೈಲಿಗೆ ಹಾಕುವ ಸಲುವಾಗಿ ಯಾವುದೇ ಸಾಕ್ಷ್ಯಧಾರಗಳಿಲ್ಲದೇ ದೂರುತ್ತಿದ್ದಾರೆ ಎಂದು ನಟ ದಿಲೀಪ್ ಪರ ವಕೀಲರು ಆರೋಪಿಸಿದ್ದಾರೆ.
'ಘಟನೆ ನಡೆದು ಐದು ವರ್ಷಗಳಾಗಿವೆ. ಈಗ ಹೊಸ ಕಥೆಗಳನ್ನು ಹೆಣೆಯುತ್ತಿದ್ದಾರೆ. ಅವರು ತಮ್ಮ ಪ್ರಕರಣವನ್ನು ರುಜುವಾತುಪಡಿಸಲು ಕೆಲವು ಮಾನ್ಯತಾ ದಾಖಲೆ, ಸಾಕ್ಷಿಗಳನ್ನು ನೀಡಬೇಕು ಎಂದು ದಿಲೀಪ್ ಪರ ವಕೀಲರು ವಾದಿಸಿದರು.
ಪ್ರಕರಣದ ಎಲ್ಲಾ ಆರೋಪಿಗಳು ವಿಚಾರಣೆಗೆ ಹಾಜರಾಗಲು ಸಿದ್ಧರಿದ್ದಾರೆ ಆದರೆ ಅವರು “ರೋವಿಂಗ್ ತನಿಖೆ” ಗೆ ಸಲ್ಲಿಸಲು ಸಿದ್ಧರಿಲ್ಲ ಎಂದು ಹೇಳಿದರು. ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿರೋಧಿಸಿದ ಪ್ರಾಸಿಕ್ಯೂಷನ್, ಪ್ರಕರಣದಲ್ಲಿ ನಟನನ್ನು ಕನಿಷ್ಠ ಐದು ದಿನಗಳ ಕಾಲ ವಿಚಾರಣೆ ಮಾಡಬೇಕಾಗುತ್ತದೆ ಎಂದು ಹೇಳಿದರು. ಆರೋಪಿಗಳಿಗೆ ಕಿರುಕುಳ ನೀಡುವುದಿಲ್ಲ ಎಂದು ಭರವಸೆ ನೀಡಿದರು.