
ಭಾರತೀಯ ಸೇನೆ
ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಕಳೆದ 22 ದಿನಗಳಲ್ಲಿ, ಭದ್ರತಾ ಪಡೆಗಳು ಭಯೋತ್ಪಾದಕರ ವಿರುದ್ಧ ತಮ್ಮ ದಾಳಿಯನ್ನು ತೀವ್ರಗೊಳಿಸುವುದರೊಂದಿಗೆ ಹೊಸ ವರ್ಷ ಪ್ರಾರಂಭವಾಗಿದ್ದು ಕಣಿವೆಯಲ್ಲಿ ಹನ್ನೆರಡುಕ್ಕೂ ಹೆಚ್ಚು ಎನ್ಕೌಂಟರ್ಗಳಲ್ಲಿ 17 ಭಯೋತ್ಪಾದಕರು ಹತರಾಗಿದ್ದಾರೆ.
ಶೋಪಿಯಾನ್ ಜಿಲ್ಲೆಯ ಕಿಲ್ಬಾಲ್ ಗ್ರಾಮದಲ್ಲಿ ಭಯೋತ್ಪಾದಕರ ಅಡಗಿರುವ ಬಗ್ಗೆ ಸುಳಿವು ನೀಡಿದ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಸ್ತುತ ಭಾರತೀಯ ಸೇನೆ ಸ್ಥಳವನ್ನು ಸುತ್ತುವರೆದಿದ್ದು ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ಮುಂದುವರೆಸಿದೆ.