ಉತ್ತರ ಪ್ರದೇಶ ಚುನಾವಣೆ: ಸಮಾಜವಾದಿ ಪಕ್ಷ, ರಾಷ್ಟ್ರೀಯ ಲೋಕ ದಳದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈಗಾಗಲೇ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಇನ್ನು ಕೆಲವು ಪಕ್ಷಗಳ ಸಚಿವರು, ಶಾಸಕರು ಬೇರೊಂದು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ.
Published: 22nd January 2022 07:47 PM | Last Updated: 22nd January 2022 07:47 PM | A+A A-

ಅಖಿಲೇಶ್ ಯಾದವ್
ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈಗಾಗಲೇ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಇನ್ನು ಕೆಲವು ಪಕ್ಷಗಳ ಸಚಿವರು, ಶಾಸಕರು ಬೇರೊಂದು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ.
ಇದೀಗ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ, ಕಾಂಗ್ರೆಸ್, ಬಿಜೆಪಿಯ ನಡುವೆ ಪ್ರಬಲ ಪೈಪೋಟಿ ಇದೆ. ಇದರ ಮಧ್ಯೆ ಸಮಾಜವಾದಿ ಪಕ್ಷ(ಎಸ್‌ಪಿ) ಮತ್ತು ರಾಷ್ಟ್ರೀಯ ಲೋಕ ದಳ(ಆರ್‌ಎಲ್‌ಡಿ) ತನ್ನ 29(10 ಎಸ್‌ಪಿ ಮತ್ತು 19 ಆರ್‌ಎಲ್‌ಡಿ) ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಇದನ್ನು ಓದಿ: ಉತ್ತರ ಪ್ರದೇಶ ಚುನಾವಣೆ: ಮೈತ್ರಿ ಘೋಷಿದ ಓವೈಸಿ; ಇಬ್ಬರು ಸಿಎಂ, ಮೂವರು ಡಿಸಿಎಂ ಮಾಡುವ ಭರವಸೆ!
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಿಂದ ತಮ್ಮ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದೆ.
ಯಾದವ್ ಪ್ರಸ್ತುತ ಅಜಂಗಢದಿಂದ ಲೋಕಸಭಾ ಸಂಸದರಾಗಿದ್ದಾರೆ. 2012ರಲ್ಲಿ ಯಾದವ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದಾಗ ವಿಧಾನ ಪರಿಷತ್ತಿನ ಹಾದಿ ಹಿಡಿದರು. ಕರ್ಹಾಲ್ ಅಸೆಂಬ್ಲಿ ಕ್ಷೇತ್ರವು ಉತ್ತರ ಪ್ರದೇಶ ವಿಧಾನಸಭೆಯ 403 ಕ್ಷೇತ್ರಗಳಲ್ಲಿ ಒಂದಾಗಿದೆ ಮತ್ತು ಮೈನ್‌ಪುರಿ (ಲೋಕಸಭಾ ಕ್ಷೇತ್ರ) ದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿದೆ.
ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.