
ಸಂಗ್ರಹ ಚಿತ್ರ
ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಕಾಂಗ್ರೆಸ್ 30 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.
ಈ ಪಟ್ಟಿಯಲ್ಲಿ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ರಾಹುಲ್ ಗಾಂಧಿ, ಪಕ್ಷದ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಸಚಿನ್ ಪೈಲಟ್, ಅಶೋಕ್ ಗೆಹ್ಲೋಟ್, ಗುಲಾಂ ನಬಿ ಆಜಾದ್, ಭೂಪೇಶ್ ಬಘೇಲ್ ಮತ್ತು ಇತರ 18 ಪ್ರಮುಖ ನಾಯಕರ ಹೆಸರುಗಳಿವೆ.
ಇದನ್ನು ಓದಿ: ಉತ್ತರ ಪ್ರದೇಶ ಚುನಾವಣೆ: ಟಿಕೆಟ್ ಪಡೆಯಲು ಕುಟುಂಬ ಸದಸ್ಯರು, ಸಂಬಂಧಿಕರ ನಡುವೆ ಪೈಪೋಟಿ ತೀವ್ರ
ಇದಕ್ಕೂ ಮೊದಲು, ಭಾರತೀಯ ಜನತಾ ಪಕ್ಷ(ಬಿಜೆಪಿ) ಉತ್ತರ ಪ್ರದೇಶ ಚುನಾವಣೆಗಾಗಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಸೇರಿ ಒಟ್ಟು 27 ಮಂದಿ ಇದ್ದಾರೆ.
ಮನೇಕಾ ಮತ್ತು ವರುಣ್ ಗಾಂಧಿಯನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಹೊರಗಿಡಲಾಗಿದೆ. ಇಬ್ಬರೂ ಉತ್ತರ ಪ್ರದೇಶದ ಸುಲ್ತಾನ್‌ಪುರ ಮತ್ತು ಪಿಲಿಭಿತ್ ನಿಂದ ಹಲವು ಬಾರಿ ಚುನಾವಣೆಯಲ್ಲಿ ಗೆದ್ದಿದ್ದಾರೆ. ಇತ್ತೀಚೆಗಷ್ಟೇ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದಲೂ ಇಬ್ಬರನ್ನೂ ಕೈಬಿಡಲಾಗಿತ್ತು.
ರಕ್ಷಣಾ ಸಚಿವ, ರಾಜ್ಯಾಧ್ಯಕ್ಷ ರಾಜನಾಥ್ ಸಿಂಗ್, ಸ್ವತಂತ್ರ ದೇವ್ ಸಿಂಗ್, ಕೇಂದ್ರ ಸಚಿವರು, ಧರ್ಮೇಂದ್ರ ಪ್ರಧಾನ್, ಸ್ಮೃತಿ ಇರಾನಿ, ಮುಖ್ತಾರ್ ಅಬ್ಬಾಸ್ ನಖ್ವಿ, ದಿನೇಶ್ ಶರ್ಮಾ, ಕೇಶವ್ ಪ್ರಸಾದ್ ಮೌರ್ಯ ಸೇರಿದಂತೆ ಪಟ್ಟಿಯಲ್ಲಿರುವ ಇತರರು. ರಾಧಾ ಮೋಹನ್ ಸಿಂಗ್ ಮತ್ತು ಸಂಜೀವ್ ಬಲ್ಯಾನ್ ಕೂಡ ಪಟ್ಟಿಯಲ್ಲಿದ್ದಾರೆ.
ರಾಜಕೀಯವಾಗಿ ಅತ್ಯಂತ ಮಹತ್ವದ ರಾಜ್ಯಗಳಲ್ಲಿ ಒಂದಾಗಿರುವ ಉತ್ತರ ಪ್ರದೇಶದ ಎಲ್ಲಾ 403 ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ.