ಕೋವಿಡ್ 3ನೇ ಅಲೆ: ದೇಶದಲ್ಲಿ 3,06,064 ಹೊಸ ಪ್ರಕರಣ ದಾಖಲು, 439 ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,06,064 ಹೊಸ ಕೇಸ್ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 439 ಮಂದಿ ಮೃತಪಟ್ಟಿದ್ದಾರೆ. ಮೊನ್ನೆಗಿಂತ 27 ಸಾವಿರದ 469 ಮಂದಿ ಕಡಿಮೆ ಸೋಂಕಿತರು ವರದಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 3,06,064 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ.
Published: 24th January 2022 09:50 AM | Last Updated: 24th January 2022 09:55 AM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,06,064 ಹೊಸ ಕೇಸ್ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 439 ಮಂದಿ ಮೃತಪಟ್ಟಿದ್ದಾರೆ. ಮೊನ್ನೆಗಿಂತ 27 ಸಾವಿರದ 469 ಮಂದಿ ಕಡಿಮೆ ಸೋಂಕಿತರು ವರದಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 3,06,064 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ.
ಸದ್ಯ ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 22 ಲಕ್ಷದ 49 ಸಾವಿರದ 335ರಷ್ಟು ವರದಿಯಾಗಿದೆ. ಪ್ರತಿದಿನ ದಾಖಲಾಗುವ ಕೊರೋನಾ ಸೋಂಕಿತರ ಸಂಖ್ಯೆ ಶೇಕಡಾ 20.75ರಷ್ಟಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 2,43,495 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,68,04,145ಕ್ಕೆ ತಲುಪಿದೆ.
#Unite2FightCorona#LargestVaccineDrive#OmicronVariant
https://t.co/TU7wZjH0lq pic.twitter.com/xh668xNM38— Ministry of Health (@MoHFW_INDIA) January 24, 2022
ಇನ್ನು ಭಾರತದಲ್ಲಿ ನಿನ್ನೆ ಒಂದೇ 14,74,753 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 71.69 ಕೋಟಿ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 162.26 ಕೋಟಿ ಡೋಸ್ ಗಳಷ್ಟು ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
ದೇಶದಲ್ಲಿ ಓಮಿಕ್ರಾನ್ ಸೋಂಕಿತರು: Omicron ಈಗ ಭಾರತದಲ್ಲಿ ಸಮುದಾಯ ಮಟ್ಟದಲ್ಲಿ ಹರಡುವ ಸ್ಥಿತಿಯಲ್ಲಿದ್ದು, ಮೆಟ್ರೊ ನಗರಗಳಲ್ಲಿ ತೀವ್ರವಾಗಿವೆ. ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.