ಕೇಂದ್ರ, ರಾಜ್ಯ ಸರ್ಕಾರ ನಡುವಿನ ಐಎಎಸ್ ಜಟಾಪಟಿ ಏನಿದು?

ಕೇಂದ್ರ ಸರ್ಕಾರ ಐಎಎಸ್ ಕೇಡರ್ ನಿಯಮಗಳಲ್ಲಿ ಬದಲಾವಣೆ ತರಲು ಹೊರಟಿದೆ. ಮೋದಿ ಸರ್ಕಾರ ಕೈಗೊಳ್ಳುತ್ತಿರುವ ಈ ನಿರ್ಧಾರದ ವಿರುದ್ಧ ಹಲವು ರಾಜ್ಯ ಸರ್ಕಾರಗಳು ಪ್ರತಿಭಟನೆಗೆ ಇಳಿದಿವೆ. ಇವುಗಳಲ್ಲಿ ಹೆಚ್ಚಿನವು ಬಿಜೆಪಿಯೇತರ ಆಡಳಿತದ ರಾಜ್ಯಗಳಾಗಿವೆ.

Published: 24th January 2022 10:38 AM  |   Last Updated: 24th January 2022 01:43 PM   |  A+A-


Parliement1

ಸಂಸತ್ತು

Online Desk

ನವದೆಹಲಿ: ಕೇಂದ್ರ ಸರ್ಕಾರ ಐಎಎಸ್ ಕೇಡರ್ ನಿಯಮಗಳಲ್ಲಿ ಬದಲಾವಣೆ ತರಲು ಹೊರಟಿದೆ. ಮೋದಿ ಸರ್ಕಾರ ಕೈಗೊಳ್ಳುತ್ತಿರುವ ಈ ನಿರ್ಧಾರದ ವಿರುದ್ಧ ಹಲವು ರಾಜ್ಯ ಸರ್ಕಾರಗಳು ಪ್ರತಿಭಟನೆಗೆ ಇಳಿದಿವೆ. ಇವುಗಳಲ್ಲಿ ಹೆಚ್ಚಿನವು ಬಿಜೆಪಿಯೇತರ ಆಡಳಿತದ ರಾಜ್ಯಗಳಾಗಿವೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಈ ವಿಷಯವನ್ನು ಮೊದಲು ಪ್ರಸ್ತಾಪಿಸಿದ್ದರು. ಅಲ್ಲದೇ, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒಂದು ವಾರದಲ್ಲಿ ಎರಡು ಬಾರಿ ಪತ್ರ ಬರೆದಿದ್ದಾರೆ. ಇದಾದ ನಂತರ ಮಹಾರಾಷ್ಟ್ರ ಸರ್ಕಾರ, ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಮತ್ತು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಕೂಡಾ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಕೇರಳ ಮುಖ್ಯಮಂತ್ರಿ ಪಿ. ವಿಜಯನ್ ಕೂಡಾ ಇದನ್ನು ವಿರೋಧಿಸಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡಾ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದು, ಕೇಂದ್ರ ಸರ್ಕಾರದ ನಿರ್ಧಾರವನ್ನು ಒಪ್ಪಿಕೊಳ್ಳದಂತೆ ಮನವಿ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಐಎಎಸ್ ಕೇಡರ್ ನಿಯಮಗಳ ತಿದ್ದುಪಡಿಗೆ ಸಂಬಂಧಿಸಿದಂತೆ ಏನಿದು ವಿವಾದ?

ಪ್ರಕರಣಕ್ಕೆ ಸಬಂಧಿಸಿದ ಪ್ರಮುಖ ಮಾಹಿತಿ:

1. ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಕೇಂದ್ರ ಸರ್ಕಾರ ಐಎಎಸ್ (ಕೇಡರ್ ) ನಿಯಮಗಳು 1954ನ್ನು ತಿದ್ದುಪಡಿ ಮಾಡಲು ಬಯಸಿದೆ ಎಂದು ಜನವರಿ 12 ರಂದು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿತ್ತು. ಈ ಬಗ್ಗೆ ಜನವರಿ 25 ರೊಳಗೆ ಅಭಿಪ್ರಾಯ ತಿಳಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚಿಸಿದೆ.

2. ಕೇಂದ್ರ ಉದ್ದೇಶಿಸಿರುವ ತಿದ್ದುಪಡಿ ಪ್ರಕಾರ, ರಾಜ್ಯ ಸರ್ಕಾರಗಳ ಹಿಡಿತವನ್ನು ಬೈಪಾಸ್ ಮಾಡುವ ಮೂಲಕ ಯಾವುದೇ ಐಎಎಸ್ ಅಧಿಕಾರಿಯನ್ನು ಡೆಪ್ಯೂಟೇಶನ್ ಮೇಲೆ ಕೇಂದ್ರ ಸರ್ಕಾರ ಕರೆಯಬಹುದಾಗಿದೆ. 

3. ಇಲ್ಲಿಯವರೆಗೂ ರಾಜ್ಯಗಳ ಐಐಎಸ್ ಅಧಿಕಾರಿಗಳು ಕೇಂದ್ರಕ್ಕೆ ಡೆಪ್ಯೂಟೇಶನ್ ಆಗುವ ಬಗ್ಗೆ ಮಾಹಿತಿ ನೀಡುತ್ತಿದ್ದರು. ಬಳಿಕ ರಾಜ್ಯ ಸರ್ಕಾರ ತನ್ನ ಅಧಿಕಾರಿಗಳ ಪಟ್ಟಿಯನ್ನು ತಯಾರಿಸಿ ಡೆಪ್ಯೂಟೇಶನ್ ಮೇಲೆ ಅವರನ್ನು ಕೇಂದ್ರಕ್ಕೆ ಕಳುಹಿಸುತಿತ್ತು.

4. ಜನವರಿ 31 ರಿಂದ ಪ್ರಾರಂಭವಾಗುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಈ ತಿದ್ದುಪಡಿಯನ್ನು ಮಂಡಿಸುವ ಸಾಧ್ಯತೆಯಿದೆ. ಜನವರಿ 1, 2021ರ ಹೊತ್ತಿಗೆ ದೇಶದಲ್ಲಿ ಒಟ್ಟು 5,200 ಐಎಎಸ್ ಅಧಿಕಾರಿಗಳಿದ್ದು, ಅವರಲ್ಲಿ 458 ಮಂದಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 

5. ಆದರೆ, ಐಐಸ್ ಕೇಡರ್ ನಿಯಮಗಳಲ್ಲಿ ಬದಲಾವಣೆ ತರಲು ಹೊರಟಿರುವ ಕೇಂದ್ರ ಸರ್ಕಾರದ ನಿರ್ಧಾರ ಹಲವು ರಾಜ್ಯಗಳ ಅಧಿಕಾರಿಗಳಿಗೆ ಇಷ್ಟವಾಗುತ್ತಿಲ್ಲ. ಇದರಿಂದಾಗಿ ಈ ನಿಯಮಗಳಲ್ಲಿ ಯಾವುದೇ ಬದಲಾವಣೆ ಮಾಡಬಾರದು ಎಂದು ಹಲವು ರಾಜ್ಯಗಳು ಒತ್ತಾಯಿಸುತ್ತಿವೆ.

6. ಈ ತಿದ್ದುಪಡಿಯನ್ನು ಮರು ಪರಿಶೀಲನೆ ಮಾಡದಿದ್ದರೆ ದೊಡ್ಡ ಹೋರಾಟ ನಡೆಸಲಾಗುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ.

7. ಇದು ಫೆಡರಲ್ ರಚನೆಗೆ ವಿರುದ್ಧವಾಗಿದೆ ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ ಹಾಗೂ ನ್ಯಾಷನಲ್ ಕಾನ್ಫರೆನ್ಸ್  ಮುಖಂಡ ಒಮರ್ ಅಬ್ದುಲ್ಲಾ ಹೇಳಿದ್ದಾರೆ. 

8 . ಈ ಹಿಂದೆಯೂ ಕೇಂದ್ರ ಮತ್ತು ರಾಜ್ಯಗಳ ನಡುವೆ ಡೆಪ್ಯೂಟೇಶನ್ ವಿಚಾರವಾಗಿ ಸಂಘರ್ಷ ನಡೆದಿತ್ತು. ಮೇ 2021ರಲ್ಲಿ ಐಎಎಸ್ ಅಲಾಪನ್ ಬಂಡೋಪಾಧ್ಯಾಯ ಕುರಿತು ಕೇಂದ್ರ ಮತ್ತು ಪಶ್ಚಿಮ ಬಂಗಾಳದ ನಡುವೆ ಸಂಘರ್ಷ ಆಗಿತ್ತು. 

9. ಬಂಗಾಳ ಸರ್ಕಾರ ಡಿಸೆಂಬರ್ 2020ರಲ್ಲಿ ಮೂವರು ಐಪಿಎಸ್ ಅಧಿಕಾರಿಗಳನ್ನು ಕೇಂದ್ರಕ್ಕೆ ಕಳುಹಿಸಲು ಒಪ್ಪಲಿಲ್ಲ. 

10. 2001ರಲ್ಲಿ ಅಟಲ್ ಸರ್ಕಾರ ತಮಿಳುನಾಡಿನ ಜಯಲಲಿತಾ ಸರ್ಕಾರದೊಂದಿಗೆ ಐಪಿಎಸ್ ಅಧಿಕಾರಿಗಳ ಬಗ್ಗೆ ವಿವಾದ ಮಾಡಿಕೊಂಡಿತ್ತು.


Stay up to date on all the latest ರಾಷ್ಟ್ರೀಯ news
Poll
RBI

ರೈತರಿಗೆ ಕೃಷಿ ಸಾಲ ನೀಡಲು CIBIL ಸ್ಕೋರ್ ಪರಿಗಣಿಸುವ ಆರ್‌ಬಿಐ ಮತ್ತು ಕೇಂದ್ರ ಸರ್ಕಾರದ ನೀತಿ ಸರಿಯೇ?


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp