ಯೋಗಿ ಅಯೋಧ್ಯೆಯಿಂದ ಸ್ಪರ್ಧಿಸಿದಿದ್ದರೆ ವಿರೋಧ ವ್ಯಕ್ತವಾಗುತ್ತಿತ್ತು: ರಾಮ ಮಂದಿರ ಪ್ರಧಾನ ಅರ್ಚಕ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಿಂದ ಚುನಾವಣೆಗೆ ಸ್ಪರ್ಧಿಸಿದ್ದರೆ ಅವರಿಗೆ ವಿರೋಧ ಎದುರಾಗುತ್ತಿತ್ತು ಎಂದು ರಾಮ ಮಂದಿರದ ಪ್ರಧಾನ ಅರ್ಚಕ ಹೇಳಿದ್ದಾರೆ.
Published: 25th January 2022 12:53 PM | Last Updated: 25th January 2022 02:14 PM | A+A A-

ಯೋಗಿ ಆದಿತ್ಯನಾಥ
ಅಯೋಧ್ಯೆ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಿಂದ ಚುನಾವಣೆಗೆ ಸ್ಪರ್ಧಿಸಿದ್ದರೆ ಅವರಿಗೆ ವಿರೋಧ ಎದುರಾಗುತ್ತಿತ್ತು ಎಂದು ರಾಮ ಮಂದಿರದ ಪ್ರಧಾನ ಅರ್ಚಕ ಹೇಳಿದ್ದಾರೆ.
ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಿಂದ ಸ್ಪರ್ಧಿಸದೇ ಇರುವುದು ಒಳ್ಳೆಯದೇ ಆಯಿತು. ಒಂದು ವೇಳೆ ಅವರು ಸ್ಪರ್ಧಿಸಿದ್ದರೆ ಅವರಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿತ್ತು ಎಂದು ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.
ಆದಿತ್ಯನಾಥ್ ಅವರು ಗೋರಖ್ ಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದೇ ಒಳಿತು ಎಂದು ಈ ಹಿಂದೆ ಹೇಳಿದ್ದೆ. ಏಕೆಂದರೆ ಮಂದಿರ ನಿರ್ಮಾಣಕ್ಕಾಗಿ ಮೂಲಸೌಕರ್ಯ ಅಭಿವೃದ್ಧಿ ಮಾಡಲು ಹಲವು ಮನೆಗಳು ಅಂಗಡಿಗಳನ್ನು ನೆಲಸಮಗೊಳಿಸಲಾಗಿತ್ತು ಈ ಹಿನ್ನೆಲೆಯಲ್ಲಿ ಅವರಿಗೆ ವಿರೋಧ ವ್ಯಕ್ತವಾಗುತ್ತಿದ್ದವು ಎಂದು ಸತ್ಯೇಂದ್ರ ದಾಸ್ ಅಭಿಪ್ರಾಯಪಟ್ಟಿದ್ದಾರೆ.
ರಾಮ ಲಲ್ಲಾ (ಭಗವಾನ್ ರಾಮ) ನನ್ನು ಕೇಳಿದ ಬಳಿಕ ಈ ಸಲಹೆಯನ್ನು ಯೋಗಿ ಆದಿತ್ಯನಾಥ್ ಅವರಿಗೆ ನೀಡಿದ್ದೆ. ಆದಿತ್ಯನಾಥ್ ಅವರು ಈ ಕ್ಷೇತ್ರದಿಂದ ಗೆಲ್ಲುತ್ತಿದ್ದರು. ಆದರೆ ಸಮಸ್ಯೆಗಳನ್ನೂ ಎದುರಿಸುತ್ತಿದ್ದರು ಎಂದು ಸತ್ಯೇಂದ್ರ ದಾಸ್ ತಿಳಿಸಿದ್ದಾರೆ.