ಗಣರಾಜ್ಯೋತ್ಸವ: ಜಮ್ಮು-ಕಾಶ್ಮೀರದ ಗಡಿಗಳಲ್ಲಿ ಹೈ ಅಲರ್ಟ್
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಿರುವ ಅಧಿಕಾರಿಗಳು, ಜಮ್ಮು ಮತ್ತು ಕಾಶ್ಮೀರದ ಗಡಿಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಭಾರತ-ಪಾಕಿಸ್ತಾನದ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
Published: 25th January 2022 12:35 PM | Last Updated: 25th January 2022 01:38 PM | A+A A-

ಸಂಗ್ರಹ ಚಿತ್ರ
ನವದೆಹಲಿ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಿರುವ ಅಧಿಕಾರಿಗಳು, ಜಮ್ಮು ಮತ್ತು ಕಾಶ್ಮೀರದ ಗಡಿಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಭಾರತ-ಪಾಕಿಸ್ತಾನದ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಅಂತರ್ರಾಷ್ಟ್ರೀಯ ಗಡಿಯಲ್ಲಿ ಹೆಚ್ಚುವರಿ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ. ಈ ಕುರಿತು ಬಿಎಸ್ಎಫ್ನ ಜಮ್ಮು ಪ್ರಾಂತ್ಯದ ಐಜಿ ಡಿ.ಕೆ. ಬೂರಾ ಮಾಹಿತಿ ನೀಡಿದ್ದು, ಎಲ್ಒಸಿಯಲ್ಲಿ ಡ್ರೋನ್ ಹಾರಾಟದ ಮೇಲೆ ನಿಗಾ ವಹಿಸುವುದು ಸೇರಿದಂತೆ ವಿವಿಧ ಕಾರ್ಯಾಚರಣೆಗೆ ಬಿಎಸ್ಎಫ್ ಸನ್ನದ್ಧವಾಗಿದೆ ಎಂದು ಹೇಳಿದ್ದಾರೆ.
ಉಗ್ರರ ದುಷ್ಕೃತ್ಯಗಳನ್ನು ವಿಫಲಗೊಳಿಸಲು ಸೇನೆ, ಸಿಆರ್ಪಿಎಫ್, ಸ್ಥಳೀಯ ಪೊಲೀಸರ ಸಹಯೋಗದಲ್ಲಿ ಜಂಟಿ ಗಸ್ತು ಆರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಗಣರಾಜ್ಯೋತ್ಸವ ದಿನದಂದು ಉಗ್ರರ ದಾಳಿ ಸಾಧ್ಯತೆ: ಇಂಟೆಲ್ ಎಚ್ಚರಿಕೆ, ದೆಹಲಿಯಲ್ಲಿ ಕಟ್ಟೆಚ್ಚರ
ಭಾರತ–ಪಾಕ್ ಗಡಿಯಲ್ಲಿ 2 ರಹಸ್ಯ ಸುರಂಗಗಳು ಪತ್ತೆ
ಭಾರತ-ಪಾಕಿಸ್ತಾನ ಗಡಿಯಲ್ಲಿ 2021ರಲ್ಲಿ 2 ರಹಸ್ಯ ಸುರಂಗಗಳನ್ನು ಪತ್ತೆ ಹಚ್ಚಲಾಗಿತ್ತು. ಆರು ಮಂದಿ ನುಸುಳುಕೋರರನ್ನು ಹತ್ಯೆ ಮಾಡಲಾಗಿತ್ತು ಅಂತ ಗಡಿ ಭದ್ರತಾ ಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
17 ಆಯುಧಗಳು, 900 ಸಜೀವ ಗುಂಡುಗಳು, 30 ಸ್ಫೋಟಕಗಳು ಹಾಗೂ 38 ಕಿಲೋ ಗ್ರಾಂನಷ್ಟು ಮಾದಕ ದ್ರವ್ಯಗಳನ್ನೂ ವಶಕ್ಕೆ ಪಡೆಯಲಾಗಿತ್ತು ಅಂತ ಮಾಹಿತಿ ನೀಡಿದ್ದಾರೆ. ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಬಿಎಸ್ಎಫ್ ಸುರಂಗ ಪತ್ತೆ ಕಾರ್ಯಾಚರಣೆ ನಡೆಸಿತ್ತು.