
ಸಾಂದರ್ಭಿಕ ಚಿತ್ರ
ಕೊಚ್ಚಿ: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿಯೇ ಮೊದಲ ಬಾರಿಗೆ ರಾತ್ರಿ ವೇಳೆ ಪ್ರಕರಣವೊಂದರ ವಿಚಾರಣೆ ನಡೆಸಲಾಗಿದೆ. ಆ ಮೂಲಕ ಕೇರಳ ಹೈಕೋರ್ಟ್ ಇತಿಹಾಸ ಸೃಷ್ಟಿಸಿದೆ.
ಇದನ್ನೂ ಓದಿ: ಜೆಎನ್ ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿದ್ದ ಹಡಗು ನಿಗದಿತ ಶುಲ್ಕವನ್ನು ತೆರಲು ನಿರಾಕರಿಸಿತ್ತು. ರಾತ್ರಿ 11.30ಕ್ಕೆ ಜಸ್ಟೀಸ್ ದೇವನ್ ರಾಮಚಂದ್ರನ್ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ವರ್ಚುವಲ್ ವಿಚಾರಣೆ ನಡೆಸಿ ಉಳಿಸಿಕೊಂಡಿರುವ ಮೊತ್ತ ಸಂದಾಯವಾಗದಿದ್ದಲ್ಲಿ ಹಡಗನ್ನು ವಶಪಡಿಸಿಕೊಳ್ಳುವಂತೆ ಆದೇಶಿಸಿದರು.
ಒಟ್ಟು 2.44 ಕೋಟಿ ರೂ. ಗಳನ್ನು ಹಡಗು ಮಾಲೀಕರು ಬಾಕಿ ಉಳಿಸಿಕೊಂಡಿದ್ದಾರೆ. ಬಾಕಿ ಮೊತ್ತವನ್ನು 25,000 ರೂ. ಬಡ್ಡಿ ಸೇರಿಸಿ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ.
ಇದನ್ನೂ ಓದಿ: ಉದ್ಯೋಗ ಸಂಸ್ಥೆ ಕಿರುಕುಳ: ಸುಪ್ರೀಂ ಕೋರ್ಟ್ ಆವರಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ