ಪಂಜಾಬ್ ಚುನಾವಣೆ: ಶೀಘ್ರದಲ್ಲೇ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ - ಸಚಿನ್ ಪೈಲಟ್
ಪಂಜಾಬ್‌ನಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ವಿವಾದದ ನಡುವೆಯೇ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಈ ಬಗ್ಗೆ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚಿಸಿದ ನಂತರ...
Published: 28th January 2022 06:44 PM | Last Updated: 28th January 2022 06:44 PM | A+A A-

ಸಚಿನ್ ಪೈಲಟ್ (ಸಂಗ್ರಹ ಚಿತ್ರ)
ಚಂಡೀಗಢ: ಪಂಜಾಬ್‌ನಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ವಿವಾದದ ನಡುವೆಯೇ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಈ ಬಗ್ಗೆ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚಿಸಿದ ನಂತರ ಸಿಎಂ ಅಭ್ಯರ್ಥಿ ಘೋಷಣೆ ಮಾಡಲಾಗುವುದು ಎಂದು ಶುಕ್ರವಾರ ಹೇಳಿದ್ದಾರೆ.
"ರಾಹುಲ್ ಗಾಂಧಿ ಹೇಳಿದಂತೆ ನಾವು ಸಾಮಾನ್ಯವಾಗಿ ರಾಜ್ಯದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವುದಿಲ್ಲ. ಆದರೆ ಇಲ್ಲಿ ಪರಿಸ್ಥಿತಿ ವಿಭಿನ್ನವಾಗಿದೆ. ಕಾರ್ಯಕರ್ತರು ಮುಖ್ಯಮಂತ್ರಿಯ ಅಭ್ಯರ್ಥಿಗಾಗಿ ಒತ್ತಾಯಿಸುತ್ತಿದ್ದಾರೆ. ಆದ್ದರಿಂದ ಕಾರ್ಯಕರ್ತರೊಂದಿಗೆ ಚರ್ಚಿಸಿದ ನಂತರ ಶೀಘ್ರದಲ್ಲೇ ಸಿಎಂ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗುವುದು" ಎಂದು ಪೈಲಟ್ ಹೇಳಿದ್ದಾರೆ.
ಇದನ್ನು ಓದಿ: ಸಿಧು ಹೆತ್ತ ತಾಯಿಯನ್ನು ಬೀದಿಪಾಲು ಮಾಡಿದ 'ಕ್ರೂರಿ': ಸಹೋದರಿ ಆರೋಪ
ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಮತ್ತು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಗುರುವಾರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಒತ್ತಾಯಿಸಿದ ನಂತರ, ಪಕ್ಷದ ಕಾರ್ಯಕರ್ತರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ವಯನಾಡ್ ಸಂಸದ ತಿಳಿಸಿದ್ದಾರೆ.
ಪಂಜಾಬ್ ನಲ್ಲಿ ಯಾರೇ ಮುಖ್ಯಮಂತ್ರಿ ಅಭ್ಯರ್ಥಿಯಾದರೂ, ಇನ್ನೊಬ್ಬರು ಅವರನ್ನು ಬೆಂಬಲಿಸುತ್ತಾರೆ ಎಂದು ಚನ್ನಿ ಮತ್ತು ಸಿಧು ಇಬ್ಬರೂ ನನಗೆ ಭರವಸೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
“ನೋಡಿ, ಇಬ್ಬರು ಮುನ್ನಡೆಸಲು ಸಾಧ್ಯವಿಲ್ಲ, ಒಬ್ಬರು ಮಾತ್ರ ಮುನ್ನಡೆಸುತ್ತಾರೆ, ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ನನಗೆ ಭರವಸೆ ನೀಡಿದ್ದಾರೆ. ಯಾರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.