ಮಹಾರಾಷ್ಟ್ರದ 12 ಬಿಜೆಪಿ ಶಾಸಕರ ಒಂದು ವರ್ಷದ ಅಮಾನತು ನಿರ್ಣಯ ರದ್ದುಪಡಿಸಿದ ಸುಪ್ರೀಂ ಕೋರ್ಟ್
ಮಹಾರಾಷ್ಟ್ರ ವಿಧಾನಸಭೆಯಿಂದ 12 ಬಿಜೆಪಿ ಶಾಸಕರ ಒಂದು ವರ್ಷದ ಅಮಾನತು ನಿರ್ಣಯವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಇದು ಅಸಂವಿಧಾನಿಕ ಮತ್ತು ಕಾನೂನು ಬಾಹಿರ ಎಂದು ಕರೆದಿದೆ.
Published: 28th January 2022 12:10 PM | Last Updated: 28th January 2022 01:23 PM | A+A A-

ಸುಪ್ರೀಂಕೋರ್ಟ್
ನವದೆಹಲಿ: ಮಹಾರಾಷ್ಟ್ರ ವಿಧಾನಸಭೆಯಿಂದ 12 ಬಿಜೆಪಿ ಶಾಸಕರ ಒಂದು ವರ್ಷದ ಅಮಾನತು ನಿರ್ಣಯವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಇದು ಅಸಂವಿಧಾನಿಕ ಮತ್ತು ಕಾನೂನು ಬಾಹಿರ ಎಂದು ಕರೆದಿದೆ.
ವಿಧಾನಸಭೆ ಸ್ಪೀಕರ್ ಕಚೇರಿಯ ಅಧಿಕಾರಿ ಭಾಸ್ಕರ್ ಜಾಧವ್ ಅವರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದಡಿಯಲ್ಲಿ ಕಳೆದ ವರ್ಷದ ಜುಲೈ 5 ರಂದು ಮಹಾರಾಷ್ಟ್ರ ಸರ್ಕಾರ 12 ಬಿಜೆಪಿ ಶಾಸಕರನ್ನು ಒಂದು ವರ್ಷದ ಅವಧಿಗೆ ಅಮಾನತು ಮಾಡಿತ್ತು.
ಶಾಸಕರಾದ ಸಂಜಯ್ ಕುಟೆ, ಆಶಿಶ್ ಶೆಲಾರ್, ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಖಾಲ್ಕರ್, ಪರಾಗ್ ಅಲವಾನಿ, ಹರೀಶ್ ಪಿಂಪಾಲೆ, ಯೋಗೇಶ್ ಸಾಗರ್, ಜಯ್ ಕುಮಾರ್ ರಾವತ್, ನಾರಾಯಣ ಕುಚೆ, ರಾಮ್ ಸತ್ಪುಟೆ ಮತ್ತು ಬಂಟಿ ಭಂಗ್ಡಿಯಾ ಅವರನ್ನು ಅಮಾನುತಗೊಳಿಸುವ ಪ್ರಸ್ತಾವನೆಯನ್ನು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಧ್ವನಿಮತದಿಂದ ಅಂಗೀಕರಿಸಲಾಗಿತ್ತು.