ಸೂಪರ್ ಮಾರ್ಕೆಟ್‍ನಲ್ಲಿ ವೈನ್ ಮಾರಾಟ: ವೈನ್ ಮದ್ಯವಲ್ಲ; ರೈತರ ಆದಾಯ ದ್ವಿಗುಣದ ಮೂಲ - ಸಂಜಯ್ ರಾವುತ್
ರಾಜ್ಯದಲ್ಲಿನ ಸೂಪರ್‌ಮಾರ್ಕೆಟ್ ಗಳು ಮತ್ತು ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರದಿಂದ ರೈತರ ಆದಾಯವು ದ್ವಿಗುಣಗೊಳಲಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಶುಕ್ರವಾರ ಹೇಳಿದ್ದಾರೆ.
Published: 28th January 2022 03:48 PM | Last Updated: 28th January 2022 04:42 PM | A+A A-

ಸಂಜಯ್ ರಾವತ್
ಮುಂಬೈ: ರಾಜ್ಯದಲ್ಲಿನ ಸೂಪರ್‌ಮಾರ್ಕೆಟ್ ಗಳು ಮತ್ತು ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರದಿಂದ ರೈತರ ಆದಾಯವು ದ್ವಿಗುಣಗೊಳಲಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಶುಕ್ರವಾರ ಹೇಳಿದ್ದಾರೆ.
“ವೈನ್ ಮದ್ಯವಲ್ಲ. ವೈನ್ ಮಾರಾಟ ಹೆಚ್ಚಾದರೆ ರೈತರಿಗೆ ಅದರಿಂದ ಲಾಭ ಸಿಗುತ್ತದೆ. ರೈತರ ಆದಾಯವನ್ನು ದ್ವಿಗುಣಗೊಳಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.
ಗುರುವಾರ, ಮಹಾರಾಷ್ಟ್ರ ಸಂಪುಟವು ಸೂಪರ್ ಮಾರ್ಕೆಟ್ ಗಳಲ್ಲಿ ಮತ್ತು ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡುವ ಪ್ರಸ್ತಾಪವನ್ನು ಅಂಗೀಕರಿಸಿತು. ಇದು ರೈತರಿಗೆ ಹೆಚ್ಚುವರಿ ಆದಾಯವನ್ನು ಒದಗಿಸುವ ಹಣ್ಣು ಆಧಾರಿತ ವೈನ್ ಗಳಿಗೆ ಉತ್ತೇಜನ ನೀಡುತ್ತದೆ ಎಂದು ಹೇಳಿದೆ.
ಮುಖ್ಯಮಂತ್ರಿಗಳ ಕಚೇರಿ ಹೊರಡಿಸಿದ ಹೇಳಿಕೆಯ ಪ್ರಕಾರ, 1,000 ಚದರ ಅಡಿ ಅಥವಾ ಅದಕ್ಕಿಂತ ಹೆಚ್ಚಿನ ವಿಸ್ತೀರ್ಣವನ್ನು ಹೊಂದಿರುವ ಮತ್ತು ಮಹಾರಾಷ್ಟ್ರದ ಅಂಗಡಿಗಳು ಮತ್ತು ಸಂಸ್ಥೆಗಳ ಕಾಯ್ದೆಯಡಿ ನೋಂದಾಯಿಸಲ್ಪಟ್ಟಿರುವ ಸೂಪರ್ ಮಾರ್ಕೆಟ್ ಗಳು ಮತ್ತು ಮಳಿಗೆಗಳು “ಶೆಲ್ಫ್-ಇನ್-ಶಾಪ್” ವಿಧಾನವನ್ನು ಅಳವಡಿಸಿಕೊಳ್ಳಬಹುದು.ಆದಾಗ್ಯೂ, ಪೂಜಾ ಸ್ಥಳಗಳು ಮತ್ತು ಶಿಕ್ಷಣ ಸಂಸ್ಥೆಗಳ ಸಮೀಪವಿರುವ ಸೂಪರ್‌ಮಾರ್ಕೆಟ್ ಗಳಿಗೆ ವೈನ್ ಮಾರಾಟ ಮಾಡಲು ಅನುಮತಿ ನೀಡಲಾಗುವುದಿಲ್ಲ. ಮದ್ಯ ನಿಷೇಧ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ವೈನ್ ಮಾರಾಟಕ್ಕೂ ಅವಕಾಶವಿಲ್ಲ ಎಂದು ಹೇಳಿದೆ.
ಇದನ್ನೂ ಓದಿ: ಮಹಾರಾಷ್ಟ್ರ: ಪಾನಪ್ರಿಯರಿಗೆ ವೈನಾದ ಸುದ್ದಿ; ಸೂಪರ್ ಮಾರ್ಕೆಟ್, ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ
ಸಂಜಯ್ ರಾವತ್ ಅವರು ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಕ್ಕಾಗಿ ಪ್ರತಿಪಕ್ಷ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಬಿಜೆಪಿ ಮಾತ್ರ ವಿರೋಧಿಸಲಿದೆ ಆದರೆ ರೈತರಿಗಾಗಿ ಏನನ್ನೂ ಮಾಡುವುದಿಲ್ಲ ಎಂದು ಸಂಜಯ್ ರಾವತ್ ಹೇಳಿದ್ದಾರೆ.
ಆದರೆ, ಬಿಜೆಪಿ ಈ ನಿರ್ಧಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯ ಸರ್ಕಾರ ಮದ್ಯ ಸೇವನೆಗೆ ಉತ್ತೇಜನ ನೀಡುತ್ತಿದೆ. ಮಹಾರಾಷ್ಟ್ರವನ್ನು ಮದ್ಯ ರಾಷ್ಟ್ರವಾಗಲು ನಾವು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಸರ್ಕಾರವು ಸಾಂಕ್ರಾಮಿಕ ರೋಗದ ಎರಡು ವರ್ಷಗಳಲ್ಲಿ ಜನರಿಗೆ ಸಹಾಯ ಮಾಡಲಿಲ್ಲ ಆದರೆ ಅದರ ಆದ್ಯತೆಯು ಮದ್ಯ ಮಾರಾಟವನ್ನು ಉತ್ತೇಜಿಸುವುದಾಗಿದೆ ಎಂದು ಫಡ್ನವೀಸ್ ಆರೋಪಿಸಿದ್ದಾರೆ.