ಗೋವಾ ಚುನಾವಣೆ: ಪರಿಸ್ಥಿತಿ ನನ್ನನ್ನು ಸ್ವತಂತ್ರವಾಗಿ ಸ್ಪರ್ಧಿಸುವಂತೆ ಮಾಡಿದೆ: ಉತ್ಪಲ್ ಪರಿಕ್ಕರ್
ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
Published: 29th January 2022 02:04 PM | Last Updated: 29th January 2022 02:40 PM | A+A A-

ಉತ್ಜಲ್ ಪರಿಕ್ಕರ್
ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಪರಿಸ್ಥಿತಿ ನನ್ನನ್ನು ಸ್ವತಂತ್ರವಾಗಿ ಸ್ಪರ್ಧಿಸುವಂತೆ ಮಾಡಿದೆ. ಪಣಜಿಯಲ್ಲಿ ಪ್ರತಿಯೊಬ್ಬರು ಭೇಟಿ ಮಾಡಲು ಪ್ರಯತ್ನಿಸುತ್ತೇನೆ. ಒಳ್ಳೆಯ ಅಭ್ಯರ್ಥಿ ಆಯ್ಕೆ ಮಾಡುವುದನ್ನು ಜನರಿಗೆ ಬಿಡುತ್ತೇನೆ ಎಂದು ಎಎನ್ ಐ ಸುದ್ದಿಸಂಸ್ಥೆಗೆ ಅವರು ತಿಳಿಸಿದರು. ಉತ್ಪಲ್ ಪರಿಕ್ಕರ್ ಗುರುವಾರ ಪಣಜಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.
ಇದನ್ನೂ ಓದಿ: ಗೋವಾ ಚುನಾವಣೆ: ಬಿಜೆಪಿ ಒಳ್ಳೆಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ: ಪರಿಕ್ಕರ್ ಪುತ್ರ ಉತ್ಪಲ್
ಪಣಜಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಕಾರಣ ಕಳೆದ ವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಉತ್ಪಲ್ ಪರಿಕ್ಕರ್ ರಾಜೀನಾಮೆ ಸಲ್ಲಿಸಿದ್ದರು. ಬಿಜೆಪಿ ಟಿಕೆಟ್ ನಿರಾಕರಣೆ ನಂತರ, ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಉತ್ಪಲ್ ಪರಿಕ್ಕರ್ ನಿರ್ಧರಿಸಿದರು.