ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ: ಕಳೆದ 12 ಗಂಟೆಗಳಲ್ಲಿ 5 ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಳೆದ 12 ಗಂಟೆಗಳಲ್ಲಿ ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ 5 ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
Published: 30th January 2022 07:30 AM | Last Updated: 30th January 2022 07:30 AM | A+A A-

ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಳೆದ 12 ಗಂಟೆಗಳಲ್ಲಿ ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ 5 ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಹತರಾದ ಭಯೋತ್ಪಾದಕರಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಕಮಾಂಡರ್ ಹಾಗೂ ಪಾಕಿಸ್ತಾನಿ ಭಯೋತ್ಪಾದಕ ಜಾಹಿದ್ ವಾನಿ ಸೇರಿದ್ದಾನೆಂದು ವರದಿಗಳು ತಿಳಿಸಿವೆ.
ಇದನ್ನೂ ಓದಿ: ಜಮ್ಮು-ಕಾಶ್ಮೀರ: ಎಲ್ಇಟಿ, ಟಿಆರ್'ಎಫ್'ನ ಮೂವರು ಉಗ್ರರ ಬಂಧನ
ಭದ್ರತಾ ಪಡೆಗಳಿಗೆ ಇದು ಉಗ್ರರ ವಿರುದ್ಧ ಹೋರಾಟದಲ್ಲಿ ಸಿಕ್ಕ ದೊಡ್ಡ ಯಶಸ್ಸು ಎಂದು ಕಾಶ್ಮೀರದ ಐಜಿಪಿ ಹೇಳಿದ್ದಾರೆ.
ಜಾಹಿದ್ ಮಂಜೂರ್ ವಾನಿ ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್ ಭಯೋತ್ಪಾದಕರ ಪೈಕಿ ಒಬ್ಬನಾಗಿದ್ದ. ಫೆಬ್ರವರಿ 14, 2019 ರಂದು 40ಕ್ಕೂ ಹೆಚ್ಚು ಸಿಆರ್‌ಪಿಎಫ್ ಸಿಬ್ಬಂದಿ ಹುತಾತ್ಮರಾದ ಲೆಟ್‌ಪುರ ಘಟನೆಯಲ್ಲಿ ಜಾಹಿದ್ ಭಾಗಿಯಾಗಿದ್ದನು. ಕುಲ್ಗಾಮ್ ಜಿಲ್ಲೆಯಲ್ಲಿ ಪೋಲೀಸರ ಹತ್ಯೆ ನಂತರ ಈಗ ಪುಲ್ವಾಮಾದ ನೈರಾ ಪ್ರದೇಶದಲ್ಲಿ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಹೆಚ್ಚಿನ ಸಂಖ್ಯೆಯ ಸೇನೆ ಮತ್ತು ಪೊಲೀಸ್ ತಂಡ ಸ್ಥಳದಲ್ಲಿ ಉಪಸ್ಥಿತರಿದ್ದು, ಸ್ಥಳವನ್ನು ವಶಪಡಿಸಿಕೊಂಡಿವೆ.
ಇದನ್ನೂ ಓದಿ: ಕಾಶ್ಮೀರ: ಅನಂತನಾಗ್‌ನಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರು
ಮತ್ತೊಂದೆಡೆ ನಿನ್ನೆ ಸಂಜೆ ಶಂಕಿತ ಭಯೋತ್ಪಾದಕರು ಕುಲ್ಗಾಮ್ ಜಿಲ್ಲೆಯ ಹಸನ್‌ಪೋರಾದಲ್ಲಿ ಹೆಡ್ ಕಾನ್‌ಸ್ಟೆಬಲ್ ಅಲಿ ಮೊಹಮ್ಮದ್ ಘನಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪೊಲೀಸರ ಮೇಲೆ ಗುಂಡು ಹಾರಿಸಿದ ನಂತರ ಭದ್ರತಾ ಪಡೆಗಳು ಪ್ರದೇಶವನ್ನು ಸಂಪೂರ್ಣ ಸುತ್ತುವರೆದಿವೆ. ಎಲ್ಲೆಡೆ ನಿಗಾ ಇಡಲಾಗಿದೆ.