ಪಾಟ್ನಾ: ಕೋರ್ಟ್ ಆವರಣದಲ್ಲಿ ಕಚ್ಚಾ ಬಾಂಬ್ ಸ್ಫೋಟ, ಪೊಲೀಸ್ ಅಧಿಕಾರಿ ಗಾಯ

ಪಾಟ್ನಾದ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಕಚ್ಚಾ ಬಾಂಬ್ ಸ್ಫೋಟವಾಗಿದ್ದು, ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಾಟ್ನಾ: ಪಾಟ್ನಾದ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಕಚ್ಚಾ ಬಾಂಬ್ ಸ್ಫೋಟವಾಗಿದ್ದು, ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಕೈಗೆ ಗಾಯವಾಗಿದೆ ಆದರೆ, ಅಪಾಯದಿಂದ ಪಾರಾಗಿದ್ದಾರೆ ಎಂದು ಪಿರ್ಬಾಹೊರ್ ಪೊಲೀಸ್ ಠಾಣೆಯ ಎಸ್ ಹೆಚ್ ಒ ಸಬಿಹುಲ್ ಹಕ್ ತಿಳಿಸಿದ್ದಾರೆ.

ಇತ್ತೀಚಿಗೆ ಈ ಪ್ರದೇಶದಲ್ಲಿ ಕೆಲ ಕಚ್ಚಾ ಬಾಂಬ್ ಗಳನ್ನು ವಶಕ್ಕೆ ಪಡೆಯಲಾಗಿತ್ತು. ಇದರ ತನಿಖೆ ಪ್ರಕ್ರಿಯೆಗಾಗಿ ಎಸ್ ಐ ಉಮಾಕಾಂತ್ ರೈ ಕೋರ್ಟ್ ಗೆ ತೆರಳಿದಾಗ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಗಾಯಗೊಂಡಿರುವುದಾಗಿ ಎಸ್ ಹೆಚ್ ಒ ಮಾಹಿತಿ ನೀಡಿದ್ದಾರೆ.

ಮೊದಲಿಗೆ ಟೈರ್ ಸ್ಫೋಟ ಸಂಭವಿಸಿರಬಹುದೆಂದು ಅಂದುಕೊಂಡಿದ್ದೇವು. ನಂತರ ನೋಡಿದಾಗ ಕಚ್ಚಾ ಬಾಂಬ್ ಸ್ಫೋಟವಾಗಿತ್ತು. ರೈ ಗಾಯಗೊಂಡಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. 

ಕೋರ್ಟ್ ಗೆ ತರುವ ಮೊದಲೇ ಬಾಂಬ್  ಗಳನ್ನು ನಿಷ್ಕ್ರೀಯಗೊಳಿಸಲಾಗಿತ್ತೆೇ ಅಥವಾ ಇಲ್ಲವೇ ಎಂಬುದರ ಪತ್ತೆ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com