ಪುಟಿನ್ ಜೊತೆ ಮೋದಿ ಮಾತುಕತೆ: ಉಕ್ರೇನ್ ವಿಚಾರದಲ್ಲಿ ನಿಲುವು ಪುನರುಚ್ಚಾರ; ಮಾತುಕತೆ ಮೂಲಕ ಇತ್ಯರ್ಥಕ್ಕೆ ಒತ್ತು!
ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಉಕ್ರೇನ್ ವಿಚಾರದಲ್ಲಿ ಮಾತುಕತೆ ಹಾಗೂ ರಾಜತಾಂತ್ರಿಕತೆ ಪರವಾದ ತನ್ನ ಧೀರ್ಘಕಾಲದ ನಿಲುವನ್ನು ಪುನರುಚ್ಚರಿಸಿದ್ದಾರೆ.
Published: 01st July 2022 08:19 PM | Last Updated: 02nd July 2022 01:38 PM | A+A A-

ವ್ಲಾಡಿಮಿರ್ ಪುಟಿನ್, ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಉಕ್ರೇನ್ ವಿಚಾರದಲ್ಲಿ ಮಾತುಕತೆ ಹಾಗೂ ರಾಜತಾಂತ್ರಿಕತೆ ಪರವಾದ ತನ್ನ ಧೀರ್ಘಕಾಲದ ನಿಲುವನ್ನು ಪುನರುಚ್ಚರಿಸಿದ್ದಾರೆ.
ದೂರವಾಣಿ ಸಂಭಾಷಣೆ ವೇಳೆ, ಅಂತಾರಾಷ್ಟ್ರೀಯ ಇಂಧನ ಮತ್ತು ಆಹಾರ ಮಾರುಕಟ್ಟೆಯ ಪರಿಸ್ಥಿತಿ ಸೇರಿದಂತೆ ಜಾಗತಿಕ ಸಮಸ್ಯೆಗಳ ಬಗ್ಗೆ ಉಭಯ ನಾಯಕರು ಚರ್ಚಿಸಿರುವುದಾಗಿ ಪ್ರಧಾನ ಮಂತ್ರಿ ಕಾರ್ಯಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಪುಟಿನ್ ಭಾರತ ವೇಳೆಯಲ್ಲಿ ಕೈಗೊಳ್ಳಲಾದ ನಿರ್ಧಾರಗಳ ಅನುಷ್ಠಾನ ಕುರಿತ ಉಭಯ ನಾಯಕರು ಪರಾಮರ್ಶೆ ನಡೆಸಿದ್ದಾರೆ. ಕೃಷಿ ಸರಕುಗಳು, ರಸಗೊಬ್ಬರ ಮತ್ತು ಫಾರ್ಮ ಉತ್ಪನ್ನಗಳನ್ನು ಮುಂದೆ ಉತ್ತೇಜಿಸುವ ನಿಟ್ಟಿನಲ್ಲಿ ದ್ವಿಪಕ್ಷೀಯ ವ್ಯಾಪಾರ ಹೇಗಿರಬೇಕು ಎಂಬುದರ ಬಗ್ಗೆ ಚಿಂತನೆಗಳನ್ನು ವಿನಿಮಯ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ: ಪ್ರಧಾನಿ ಮೋದಿ ಇದ್ದಲ್ಲಿಗೇ ಬಂದು ಭುಜ ತಟ್ಟಿ, ಕೈ ಕುಲುಕಿ ಮಾತನಾಡಿಸಿದ ಅಮೆರಿಕ ಅಧ್ಯಕ್ಷ ಬೈಡನ್: ವಿಡಿಯೋ ವೈರಲ್
ಪ್ರಸ್ತುತದಲ್ಲಿನ ಉಕ್ರೇನ್ ವಿಚಾರದಲ್ಲಿ ಭಾರತದ ನಿಲುವನ್ನು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. ಮಾತುಕತೆ ಹಾಗೂ ರಾಜತಾಂತ್ರಿಕ ಪರವಾದ ಭಾರತದ ಧೀರ್ಘ ಕಾಲದ ನಿಲುವನ್ನು ಪುನರುಚ್ಚರಿಸಿದ್ದಾರೆ. ಜಾಗತಿಕ ಮತ್ತು ದ್ವಿಪಕ್ಷೀಯ ವಿಚಾರ ಕುರಿತಂತೆ ನಿರಂತರವಾಗಿ ಸಮಾಲೋಚನೆ ನಡೆಸಲು ಉಭಯ ನಾಯಕರು ಒಪ್ಪಿಕೊಂಡಿರುವುದಾಗಿ ಪಿಎಂಒ ತಿಳಿಸಿದೆ.