social_icon

ನೂಪುರ್ ಶರ್ಮ ಲೂಸ್ ಟಾಕ್ ನಿಂದ ದೇಶಕ್ಕೆ ಬೆಂಕಿ ಬಿತ್ತು, ಆಕೆ ಇಡೀ ದೇಶದ ಕ್ಷಮೆ ಯಾಚಿಸಬೇಕು: ಸುಪ್ರೀಂ ಕೋರ್ಟ್ ಕೆಂಡಾಮಂಡಲ

ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಇಡೀ ದೇಶದ ಕ್ಷಮೆ ಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

Published: 01st July 2022 12:00 PM  |   Last Updated: 01st July 2022 01:47 PM   |  A+A-


Nupur sharma

ನೂಪುರ್ ಶರ್ಮಾ

Posted By : shilpa
Source : Online Desk

ದೆಹಲಿ:  ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಇಡೀ ದೇಶದ ಕ್ಷಮೆ ಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಸುಪ್ರೀಂ ಕೋರ್ಟ್ ನೂಪುರ್ ಶರ್ಮಾ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಪ್ರವಾದಿ ವಿರುದ್ಧ ಹೇಳಿಕೆ ನೀಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಕ್ಕೆ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಹೇಳಿದೆ.

ನೂಪುರ್ ಶರ್ಮ ವಿವಾದಾತ್ಮಕ ಹೇಳಿಕೆ ಇಡೀ ದೇಶಕ್ಕೆ ಬೆಂಕಿ ಹಚ್ಚಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಉದಯ್‌ಪುರದಲ್ಲಿ ಟೈಲರ್‌ನ ಹತ್ಯೆಯಾದ ದುರದೃಷ್ಟಕರ ಘಟನೆಗೆ ಆಕೆಯ ಆಕ್ರೋಶವೇ ಕಾರಣ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನೂಪುರ್ ಶರ್ಮಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸುಪ್ರೀಂ ಕೋರ್ಟ್, ಅಮಾನತುಗೊಂಡಿರುವ ಬಿಜೆಪಿ ವಕ್ತಾರರು ರಾಷ್ಟ್ರದ ಭದ್ರತೆಗೆ ಬೆದರಿಕೆ ಹಾಕಿರುವುದನ್ನು ಗಮನಿಸಿ ಇಡೀ ದೇಶದ ಕ್ಷಮೆಯಾಚಿಸುವಂತೆ ಸೂಚಿಸಿದೆ. ಆಕೆ ವಕೀಲೆ ಎಂದು ಹೇಳಿಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ಲವೇ ಎಂದು ತಪರಾಕಿ ಹಾಕಿದೆ.

ಇದನ್ನೂ ಓದಿ: ರಾಜಸ್ತಾನ: ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್; ಹಾಡಹಗಲೇ ವ್ಯಕ್ತಿಯ ಕತ್ತು ಸೀಳಿ ಬರ್ಬರ ಹತ್ಯೆ!

ಆಕೆಯ ಹೇಳಿಕೆ ಹೇಗೆ ಪ್ರಚೋದನೆ ನೀಡಿತು ಎಂಬುದನ್ನು ನಾವು ನೋಡಿದ್ದೇವೆ, ಉದಯಪುರದಲ್ಲಿ ಟೈಲರ್ ಕೊಲೆಯಾದ ದುರದೃಷ್ಟಕರ ಘಟನೆಗೆ ಆಕೆ ಏಕಾಏಕಿ ಕಾರಣವಾಗಿದ್ದಾರೆ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ.

ಶರ್ಮಾ ಹೇಳಿಕೆಗಳು ಆಕೆಯ ಸೊಕ್ಕು ಮತ್ತು ಹಠಮಾರಿತನವನ್ನು ತೋರಿಸುತ್ತದೆ, ಆಕೆ ಪಕ್ಷದ ವಕ್ತಾರರಾಗಿರಬಹುದು, ಆದರೆ ಈ ನೆಲದ ಕಾನೂನನ್ನು ಗೌರವಿಸದೆ ಯಾವುದೇ ಹೇಳಿಕೆ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಕಿಡಿ ಕಾರಿದೆ.

ಇದನ್ನೂ ಓದಿ: ಮುಂದಿನ ಆರೇಳು ತಿಂಗಳಲ್ಲಿ ನೂಪುರ್ ಶರ್ಮಾ ಬಿಗ್ ಲೀಡರ್- ಓವೈಸಿ

ನೂಪುರ್ ಶರ್ಮಾ ಹೈಕೋರ್ಟ್​ಗೆ ಹೋಗಿ ಅರ್ಜಿ ಸಲ್ಲಿಸಲಿ ಎಂದು ನೂಪುರ್ ಶರ್ಮಾ ಅವರ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನೂಪುರ ಶರ್ಮಾಗೆ ದೆಹಲಿ ಪೊಲೀಸರು ರೆಡ್ ಕಾರ್ಪೆಟ್ ಸ್ವಾಗತ ಕೋರಿರಬೇಕು. ಇಷ್ಟೊಂದು ಎಫ್.ಐ.ಆರ್. ದಾಖಲಾದರೂ ದೆಹಲಿ ಪೊಲೀಸ್ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ತಮ್ಮ ವಿರುದ್ಧದ ಎಲ್ಲ ಕೇಸ್ ಗಳನ್ನು ದೆಹಲಿಗೆ ವರ್ಗಾವಣೆ ಮಾಡಬೇಕೆಂದು ನೂಪುರ್ ಶರ್ಮಾ ಕೋರಿದ್ದರು. ಇದೀಗ ನೂಪುರ್ ಶರ್ಮಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.


Stay up to date on all the latest ದೇಶ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • Ashok M E

    By This judgement the court has not considered her secuirty they only felt about her words. How can we accept this as judgement. They don't have any rights to say these words.
    1 year ago reply
flipboard facebook twitter whatsapp