ಪತ್ರಕರ್ತ ಮೊಹಮ್ಮದ್ ಜುಬೇರ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ದೆಹಲಿ ಪೊಲೀಸ್; 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರಿಕೆ
ಹಿಂದೂ ದೇವತೆಯ ವಿರುದ್ಧ 2018 ರಲ್ಲಿ ಪೋಸ್ಟ್ ಮಾಡಿದ "ಆಕ್ಷೇಪಾರ್ಹ ಟ್ವೀಟ್" ಗೆ ಸಂಬಂಧಿಸಿದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರನ್ನು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ನ್ಯಾಯಾಂಗ ಬಂಧನವನ್ನು ಕೋರಿದ್ದಾರೆ.
Published: 02nd July 2022 01:05 PM | Last Updated: 02nd July 2022 01:52 PM | A+A A-

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್
ನವದೆಹಲಿ: ಹಿಂದೂ ದೇವತೆಯ ವಿರುದ್ಧ 2018 ರಲ್ಲಿ ಪೋಸ್ಟ್ ಮಾಡಿದ "ಆಕ್ಷೇಪಾರ್ಹ ಟ್ವೀಟ್" ಗೆ ಸಂಬಂಧಿಸಿದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರನ್ನು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ನ್ಯಾಯಾಂಗ ಬಂಧನವನ್ನು ಕೋರಿದ್ದಾರೆ.
ಐದು ದಿನಗಳ ಕಸ್ಟಡಿ ವಿಚಾರಣೆಯ ಅವಧಿ ಮುಗಿದ ನಂತರ ಜುಬೈರ್‌ನನ್ನು ನ್ಯಾಯಾಲಯಕ್ಕೆ ಇಂದು ಹಾಜರುಪಡಿಸಲಾಯಿತು. ಆತನ ಕಸ್ಟಡಿ ವಿಚಾರಣೆ ಇನ್ನು ಮುಂದೆ ಅಗತ್ಯವಿಲ್ಲ ಎಂದು ಪೊಲೀಸರು ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧಾ ಸರ್ವರಿಯಾ ಅವರ ಮುಂದೆ ಹೇಳಿದ್ದಾರೆ.
ಇದನ್ನೂ ಓದಿ: ಆಲ್ಟ್ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಬೆಂಗಳೂರಿನ ನಿವಾಸದಲ್ಲಿ ಶೋಧ ನಡೆಸಿದ ದೆಹಲಿ ಪೊಲೀಸರು!
ವಿಚಾರಣೆಯ ಸಂದರ್ಭದಲ್ಲಿ, ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ಅವರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ) ಮತ್ತು 201 (ಸಾಕ್ಷ್ಯ ನಾಶ) ಮತ್ತು ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಸೆಕ್ಷನ್ 35 ರ ಹೊಸ ನಿಬಂಧನೆಗಳನ್ನು ಅನ್ವಯಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಪೊಲೀಸರು ಅರ್ಜಿ ಸಲ್ಲಿಸಿದ ನಂತರ, ಜುಬೈರ್ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾನೆ. ಸದ್ಯದಲ್ಲೇ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಪೊಲೀಸರು ಫೋನ್ ವಶಪಡಿಸಿಕೊಂಡ ಸಮಯದಲ್ಲಿ ಜುಬೈರ್ ಆ ಟ್ವೀಟ್ ಮಾಡಿದ್ದಲ್ಲ ಎಂದು ಆತನ ಪರ ವಕೀಲ ವೃಂದಾ ಗ್ರೋವರ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಇದನ್ನೂ ಓದಿ: ಮೊಹಮ್ಮದ್ ಜುಬೇರ್ ಬಂಧನ ಖಂಡಿಸಿದ ಎಡಿಟರ್ಸ್ ಗಿಲ್ಡ್, ಪ್ರೆಸ್ ಕ್ಲಬ್; ಇದು 'ತಾರತಮ್ಯದ ಕ್ರಮ' ಎಂದ ಜಮಿಯತ್
ಟ್ವೀಟ್ 2018ರದ್ದಾಗಿದ್ದು, ನಾನು (ಜುಬೈರ್) ಪ್ರಸ್ತುತ ಬಳಸುತ್ತಿರುವ ಫೋನ್. ಆ ಟ್ವೀಟ್ ಮಾಡಿದ್ದು ನಾನೇ ಎಂದು ಸಹ ಹೇಳಿಕೊಂಡಿದ್ದಾನೆ. ಜುಬೈರ್ ವಿರುದ್ಧ ಈ ಹಿಂದೆ ಐಪಿಸಿಯ ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಮತ್ತು 295 (ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳವನ್ನು ಅಪವಿತ್ರಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.