ಉಪರಾಷ್ಟ್ರಪತಿ ಚುನಾವಣೆ: ಮಾಜಿ ಸಿಎಂ, ಕ್ಯಾಪ್ಟನ್ ಅಮರಿಂದರ್ ಸಿಂಗ್ ಎನ್‌ಡಿಎ ಅಭ್ಯರ್ಥಿ?

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಾಗಿದೆ.
ಕ್ಯಾಪ್ಟನ್ ಅಮರಿಂದರ್ ಸಿಂಗ್
ಕ್ಯಾಪ್ಟನ್ ಅಮರಿಂದರ್ ಸಿಂಗ್

ನವದೆಹಲಿ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಾಗಿದೆ.

ಉಪರಾಷ್ಟ್ರಪತಿ ಚುನಾವಣೆಗೆ ಜುಲೈ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಗಸ್ಟ್ 6ರಂದು ಚುನಾವಣೆ ನಡೆಯಲಿದೆ.

ಪಂಜಾಬ್ ಲೋಕ ಕಾಂಗ್ರೆಸ್ ಬಿಜೆಪಿಯೊಂದಿಗೆ ವಿಲೀನ?
ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿರುವ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಲಂಡನ್‌ನಿಂದ ಹಿಂದಿರುಗಿದ ನಂತರ ತಮ್ಮ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ ಅನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಸಾಧ್ಯತೆಯಿದೆ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಿಂಗ್ ಕಾಂಗ್ರೆಸ್ ತೊರೆದ ನಂತರ ಪಿಎಲ್ ಸಿ ಪಕ್ಷವನ್ನು ಕಟ್ಟಿದ್ದರು.

ಪಿಎಲ್ ಸಿ ಪಕ್ಷವು 2022ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಸುಖದೇವ್ ಸಿಂಗ್ ಧಿಂಡ್ಸಾ ನೇತೃತ್ವದ ಶಿರೋಮಣಿ ಅಕಾಲಿ ದಳ (ಸಂಯುಕ್) ಜೊತೆ ಮೈತ್ರಿ ಮಾಡಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com