ಪ್ರವಾದಿ ಕುರಿತು ಹೇಳಿಕೆ: ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಕೋಲ್ಕತಾ ಪೊಲೀಸರಿಂದ ಲುಕೌಟ್ ಸರ್ಕ್ಯುಲರ್!
ಪ್ರವಾದಿ ಮಹಮದ್ ಕುರಿತಂತೆ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಕೋಲ್ಕತಾ ಪೊಲೀಸರು ಲುಕೌಟ್ ಸರ್ಕ್ಯುಲರ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
Published: 02nd July 2022 04:27 PM | Last Updated: 02nd July 2022 04:31 PM | A+A A-

ನೂಪುರ್ ಶರ್ಮಾ
ಕೋಲ್ಕತಾ: ಪ್ರವಾದಿ ಮಹಮದ್ ಕುರಿತಂತೆ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಕೋಲ್ಕತಾ ಪೊಲೀಸರು ಲುಕೌಟ್ ಸರ್ಕ್ಯುಲರ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರವಾದಿ ಮಹಮದ್ ಕುರಿತು ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿ ಅಮಾನತುಗೊಂಡ ಬಿಜೆಪಿ ನಾಯಕ ನೂಪುರ್ ಶರ್ಮಾ ವಿರುದ್ಧ ಕೋಲ್ಕತ್ತಾ ಪೊಲೀಸರು ಲುಕ್ ಔಟ್ ಸುತ್ತೋಲೆ ಹೊರಡಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾದ ಅಮ್ಹೆರ್ಸ್ಟ್ ಮತ್ತು ನರ್ಕೆಲ್ದಂಗ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ದೂರಿಗೆ ಸಂಬಂಧಿಸಿದಂತೆ ಈ ಹಿಂದೆ ಪೊಲೀಸರು 2 ಬಾರಿ ವಿಚಾರಣೆಗೆ ಕರೆದಿದ್ದರು.
ಇದನ್ನೂ ಓದಿ: ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್; ಮಹಾರಾಷ್ಟ್ರ ವ್ಯಾಪಾರಿ ಹತ್ಯೆ ಪ್ರಕರಣ ಎನ್ಐಎ ತನಿಖೆಗೆ, ಆರೋಪಿಗಳು ಪೊಲೀಸ್ ಕಸ್ಟಡಿಗೆ!
ಆದರೆ ನೂಪುರ್ ಶರ್ಮಾ ವಿಚಾರಣೆಗೆ ಗೈರಾದಿದ್ದರು. ಈ ಸಂಬಂಧ ಪೊಲೀಸರು ವಿವರ ಕೋರಿದ್ದರೂ ಕಾರಣಾಂತರಗಳಿಂದ ತಾವು ವಿಚಾರಣೆಗೆ ಹಾಜರಾಗಿರಲಿಲ್ಲ. ಅಲ್ಲದೆ ವಿಚಾರಣೆಗೆ ಹೆಚ್ಚಿನ ಸಮಯ ಕೋರಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಇದೀಗ ಕೋಲ್ಕತಾ ಪೊಲೀಸರು ನೂಪುರ್ ಶರ್ಮಾ ವಿರುದ್ಧ ಲುಕೌಟ್ ಸರ್ಕ್ಯುಲರ್ ಹೊರಡಿಸಿದ್ದಾರೆ.
West Bengal | Kolkata Police issues a Look Out Circular against suspended BJP leader Nupur Sharma.
— ANI (@ANI) July 2, 2022
Earlier she was asked to appear before the Amherst and Narkeldanga Police Stations. However, she didn't appear before them and sought more time.
ಛೀಮಾರಿ ಹಾಕಿದ್ದ ಸುಪ್ರೀಂ ಕೋರ್ಟ್
ಇನ್ನು ತನ್ನ ಹೇಳಿಕೆ ವಿರೋಧಿಸಿ ದೇಶಾದ್ಯಂತ ದಾಖಲಾಗಿರುವ ದೂರುಗಳನ್ನು ಮತ್ತು ವಿಚಾರಣೆಯನ್ನು ದೆಹಲಿಗೆ ವರ್ಗಾವಣೆ ಮಾಡುವಂತೆ ನೂಪುರ್ ಶರ್ಮಾ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ನೂಪುರ್ ಶರ್ಮಾ ಅವರಿಗೆ ಛೀಮಾರಿ ಹಾಕಿತ್ತು. 'ನೂಪುರ್ ಶರ್ಮ ವಿವಾದಾತ್ಮಕ ಹೇಳಿಕೆ ಇಡೀ ದೇಶಕ್ಕೆ ಬೆಂಕಿ ಹಚ್ಚಿದೆ. ಉದಯ್‌ಪುರದಲ್ಲಿ ಟೈಲರ್‌ನ ಹತ್ಯೆಯಾದ ದುರದೃಷ್ಟಕರ ಘಟನೆಗೆ ಆಕೆಯ ಆಕ್ರೋಶವೇ ಕಾರಣ.
ಇದನ್ನೂ ಓದಿ: ಮಹಾರಾಷ್ಟ್ರ: ಉದಯಪುರ್ ಟೈಲರ್ ಹತ್ಯೆ ಬೆನ್ನಲ್ಲೇ ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದ ಕೆಮಿಸ್ಟ್ ಹತ್ಯೆ!
ಆಕೆಯ ಹೇಳಿಕೆ ಹೇಗೆ ಪ್ರಚೋದನೆ ನೀಡಿತು ಎಂಬುದನ್ನು ನಾವು ನೋಡಿದ್ದೇವೆ, ಉದಯಪುರದಲ್ಲಿ ಟೈಲರ್ ಕೊಲೆಯಾದ ದುರದೃಷ್ಟಕರ ಘಟನೆಗೆ ಆಕೆ ಏಕಾಏಕಿ ಕಾರಣವಾಗಿದ್ದಾರೆ. ಶರ್ಮಾ ಹೇಳಿಕೆಗಳು ಆಕೆಯ ಸೊಕ್ಕು ಮತ್ತು ಹಠಮಾರಿತನವನ್ನು ತೋರಿಸುತ್ತದೆ, ಆಕೆ ಪಕ್ಷದ ವಕ್ತಾರರಾಗಿರಬಹುದು, ಆದರೆ ಈ ನೆಲದ ಕಾನೂನನ್ನು ಗೌರವಿಸದೆ ಯಾವುದೇ ಹೇಳಿಕೆ ನೀಡಬಾರದು. ಆಕೆ ಇಡೀ ದೇಶದ ಕ್ಷಮೆ ಕೇಳಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದರು.
ಇದನ್ನೂ ಓದಿ: ಉದಯಪುರ ಟೈಲರ್ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬ 'ಬಿಜೆಪಿ ಸದಸ್ಯ': ಕಾಂಗ್ರೆಸ್ ಆರೋಪ
ಅಲ್ಲದೆ ಅವರ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ನೂಪುರ್ ಶರ್ಮಾ ಹೈಕೋರ್ಟ್ಗೆ ಹೋಗಿ ಅರ್ಜಿ ಸಲ್ಲಿಸಲಿ. ಶರ್ಮಾಗೆ ದೆಹಲಿ ಪೊಲೀಸರು ರೆಡ್ ಕಾರ್ಪೆಟ್ ಸ್ವಾಗತ ಕೋರಿರಬೇಕು. ಇಷ್ಟೊಂದು ಎಫ್.ಐ.ಆರ್. ದಾಖಲಾದರೂ ದೆಹಲಿ ಪೊಲೀಸರು ಏಕೆ ಕ್ರಮ ಕೈಗೊಂಡಿಲ್ಲ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.