
ಏಕನಾಥ್ ಶಿಂಧೆ
ಮುಂಬೈ: ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ತಮ್ಮ ವಿರುದ್ಧ ಬಂಡಾಯವೆದ್ದಿದ್ದ ಏಕನಾಥ್ ಶಿಂಧೆ ಅವರನ್ನು ಶಿವಸೇನಾ ನಾಯಕನ ಸ್ಥಾನದಿಂದ ವಜಾಗೊಳಿಸಿದ್ದಾರೆ.
ಶಿಂಧೆ ನೇತೃತ್ವದ ಶಿವಸೇನೆಯ ಬಂಡಾಯ ಶಾಸಕರಿಂದ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿ ಆಗಿತ್ತು. ಅವರು ಬೆಂಬಲಿತ ಇತರ ಶಾಸಕರೊಂದಿಗೆ ಗುವಾಹಟಿಯಲ್ಲಿ ಉಳಿದಿದ್ದರು. ಇದರ ಬೆನ್ನಲ್ಲೆ ಉದ್ಧವ್ ಠಾಕ್ರೆ ಬುಧವಾರ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಶಿಂಧೆ ಅವರನ್ನು ತೆಗೆದುಹಾಕಲಾಗಿದೆ ಎಂದು ಶಿವಸೇನೆ ಮಾಹಿತಿ ನೀಡಿದೆ.
ಮಹಾರಾಷ್ಟ್ರದ ಮಾಜಿಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದಕ್ಕೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿತ್ತು.
ಇದನ್ನೂ ಓದಿ: ಅಮಿತ್ ಶಾ ಮೊದಲೇ ಇದನ್ನು ಮಾಡಿದಿದ್ದರೆ, ಅಘಾಡಿ ಸರ್ಕಾರವೇ ಇರುತ್ತಿರಲಿಲ್ಲ; ಮೆಟ್ರೋ ಶೆಡ್ ಸ್ಥಳ ಬದಲಾವಣೆ ಬೇಡ: ಉದ್ಧವ್ ಠಾಕ್ರೆ
ಎರಡೂವರೆ ವರ್ಷಗಳ ಹಿಂದೆಯೇ ಶಿವಸೇನಾ ನಾಯಕನಿಗೆ ಸಿಎಂ ಸ್ಥಾನ ಬಿಟ್ಟುಕೊಡಲು ಬಿಜೆಪಿ ತೀರ್ಮಾನಿಸಿದ್ದರೆ, ಮಹಾ ವಿಕಾಸ್ ಅಘಾಡಿ (ಎಂವಿಎ) ಸೃಷ್ಟಿಯಾಗುತ್ತಿರಲೇ ಇಲ್ಲ ಎಂದು ಹೇಳಿತ್ತು.