ಮಹಾರಾಷ್ಟ್ರ ವಿಧಾನಸಭೆ: ಶಿವಸೇನೆ ರೆಬೆಲ್ ಬಣದ ಮೇಲುಗೈ: ಬಿಜೆಪಿ ಅಭ್ಯರ್ಥಿ ನಾರ್ವೇಕರ್ ಸ್ಪೀಕರ್ ಆಗಿ ಆಯ್ಕೆ!

ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆ ಚುನಾವಣೆಯಲ್ಲೂ ಶಿವಸೇನೆಯ ರೆಬೆಲ್ ಶಾಸಕರ ಬಣ ಮೇಲುಗೈ ಸಾಧಿಸಿದ್ದು, ಶಿವಸೇನೆ ರೆಬೆಲ್ ಬಣ ಹಾಗೂ ಬಿಜೆಪಿಯ ಅಭ್ಯರ್ಥಿ ರಾಹುಲ್ ನಾರ್ವೇಕರ್ ಅವರು ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.
ರಾಹುಲ್ ನಾರ್ವೇಕರ್
ರಾಹುಲ್ ನಾರ್ವೇಕರ್

ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆ ಚುನಾವಣೆಯಲ್ಲೂ ಶಿವಸೇನೆಯ ರೆಬೆಲ್ ಶಾಸಕರ ಬಣ ಮೇಲುಗೈ ಸಾಧಿಸಿದ್ದು, ಶಿವಸೇನೆ ರೆಬೆಲ್ ಬಣ ಹಾಗೂ ಬಿಜೆಪಿಯ ಅಭ್ಯರ್ಥಿ ರಾಹುಲ್ ನಾರ್ವೇಕರ್ ಅವರು ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಭಾನುವಾರ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದ್ದು, 164 ಮತಗಳನ್ನು ಪಡೆದ ನಾರ್ವೇಕರ್ ಅವರು 107 ಮತಗಳನ್ನು ಪಡೆದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಅಭ್ಯರ್ಥಿ ರಾಜನ್ ಸಾಲ್ವಿ ಅವರನ್ನು ಸೋಲಿಸಿದರು.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆ ನಾಳೆಯಿಂದ ಆರಂಭವಾಗಲಿದ್ದು, ಸಿಎಂ ಏಕನಾಥ್ ಶಿಂಧೆ ವಿಶ್ವಾಸ ಮತ ಯಾಚನೆಗೆ ವೇದಿಕೆ ಸಿದ್ಧವಾದಂತಾಗಿದೆ. ಸದನದ ಎರಡು ದಿನಗಳ ವಿಶೇಷ ಅಧಿವೇಶನ ಭಾನುವಾರ ಬೆಳಗ್ಗೆ 11 ಗಂಟೆಗೆ ಆರಂಭವಾಯಿತು. ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆ ಎದುರಿಸಲಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com