ಮಹಾ 'ಸಂಘರ್ಷ': ವಿಶ್ವಾಸಮತ ಗೆದ್ದ ಶಿಂಧೆ, ಮಹಾರಾಷ್ಟ್ರದಲ್ಲಿ ಇನ್ನು ಏಕನಾಥ್ ದರ್ಬಾರ್!
ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಶ್ವಾಸಮತ ಯಾಚನೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಶಾಸಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ತಮ್ಮ ಸಿಎಂ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.
Published: 04th July 2022 12:19 PM | Last Updated: 04th July 2022 12:59 PM | A+A A-

ವಿಶ್ವಾಸಮತ ಗೆದ್ದ ಶಿಂಧೆ
ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಶ್ವಾಸಮತ ಯಾಚನೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಶಾಸಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ತಮ್ಮ ಸಿಎಂ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.
Maharashtra CM Eknath Shinde wins the trust vote by a 164-99 margin, 3 members abstained from voting. pic.twitter.com/ZbaM54n1fd
— ANI (@ANI) July 4, 2022
164–99 ಮತಗಳ ಅಂತರದಲ್ಲಿ ಶಿಂಧೆ ಸರ್ಕಾರ ವಿಶ್ವಾಸ ಗೆದ್ದಿದೆ. 3 ಸದಸ್ಯರು ವಿಧಾನಸಭೆ ಅಧಿವೇಶನಕ್ಕೆ ಗೈರಾಗಿದ್ದರು. ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಮಹಾವಿಕಾಸ ಆಘಾಡಿ ಸರ್ಕಾರದ ವಿರುದ್ಧ ಬಂಡೆದ್ದು, ಬಿಜೆಪಿಯೊಂದಿಗೆ ಸೇರಿ ಶಿಂಧೆ ಅವರು ಮುಖ್ಯಮಂತ್ರಿಯಾಗಿದ್ದರು. ಬಿಜೆಪಿಯ ದೇವೇಂದ್ರ ಫಡಣವೀಸ್ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ ವಿಧಾನಸಭೆ: ಶಿವಸೇನೆ ರೆಬೆಲ್ ಬಣದ ಮೇಲುಗೈ: ಬಿಜೆಪಿ ಅಭ್ಯರ್ಥಿ ನಾರ್ವೇಕರ್ ಸ್ಪೀಕರ್ ಆಗಿ ಆಯ್ಕೆ!
ಉದ್ಧವ್ ಠಾಕ್ರೆಯೊಂದಿಗೆ ಗುರುತಿಸಿಕೊಂಡಿದ್ದ ಮತ್ತೊಬ್ಬ ಶಾಸಕ, ಸಂತೋಶ್ ಬಂಗಾರ್ ಎಂಬುವವರೂ ಕೂಡ ಇಂದು ಶಿಂಧೆ ಬಣಕ್ಕೆ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಶಿಂಧೆ ಕಡೆಯ ಶಾಸಕರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಇದಕ್ಕೂ ಹಿಂದೆ ಶಿಂಧೆ – ಬಿಜೆಪಿ ದೋಸ್ತಿ ತಮ್ಮ ಕಡೆಯ ರಾಹುಲ್ ನರ್ವೇಕರ್ (ಬಿಜೆಪಿ) ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿಕೊಳ್ಳುವಲ್ಲಿ ಸಫಲವಾಗಿತ್ತು.