ಮಹಾರಾಷ್ಟ್ರ ನೂತನ ಸರ್ಕಾರ ಶೀಘ್ರವೇ ಪತನಗೊಳ್ಳಲಿದೆ: ಸಿಎಂ ಮಮತಾ ಬ್ಯಾನರ್ಜಿ ಭವಿಷ್ಯ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ನೂತನ ಸರ್ಕಾರ ಶೀಘ್ರವೇ ಪತನಗೊಳ್ಳಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭವಿಷ್ಯ ನುಡಿದಿದ್ದಾರೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Updated on

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ನೂತನ ಸರ್ಕಾರ ಶೀಘ್ರವೇ ಪತನಗೊಳ್ಳಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭವಿಷ್ಯ ನುಡಿದಿದ್ದಾರೆ.

ಕೊಲ್ಕತ್ತಾದ ವಾಹಿನಿಯ ಒಂದು ಸಮಾರಂಭದಲ್ಲಿ ಮಾತನಾಡಿದ ಅವರು, ಈ ಸರ್ಕಾರ ಮುಂದುವರೆಯುವ ಬಗ್ಗೆ ನನಗೆ ನಂಬಿಕೆ ಇಲ್ಲ. ಇದು ಅನೈತಿಕ ಪ್ರಜಾಪ್ರಭುತ್ವ ವಿರೋಧಿ ಸರ್ಕಾರ. ಅವರು ಸರ್ಕಾರವನ್ನು ಗೆದ್ದಿರಬಹುದು, ಆದರೆ ಮಹಾರಾಷ್ಟ್ರದ ಹೃದಯವನ್ನು ಗೆಲ್ಲಲಿಲ್ಲ ಎಂದು ಮಮತಾ ಹೇಳಿದ್ದಾರೆ.

ಅಧಿಕಾರವನ್ನು ಬಳಸಿಕೊಂಡು ಪ್ರಜಾಪ್ರಭುತ್ವವನ್ನು ಹೊಡೆದುರುಳಿಸಬಹುದು. ಆದರೆ ದೇಶದ ಜನರು ಪ್ರಜಾಸತ್ತಾತ್ಮಕ ವಿಧಾನಗಳನ್ನು ಬಳಸಿಕೊಂಡು ನಿಮ್ಮನ್ನು ಬುಲ್ಡೋಜ್ ಮಾಡುತ್ತಾರೆ ಎಂದ ಅವರು ಮಹಾರಾಷ್ಟ್ರದ ಶಿವಸೇನೆ ಬಂಡಾಯ ಶಾಸಕರಿಗೆ ಅಸ್ಸಾಂನಲ್ಲಿ ಬಿಜೆಪಿಯಿಂದ ಹಣ ಮತ್ತು ಇತರ ವಸ್ತುಗಳನ್ನು ಸರಬರಾಜು ಮಾಡಲಾಗಿದೆ ಎಂದು ಆರೋಪಿಸಿದರು.

ಮಹಾರಾಷ್ಟ್ರ ವಿಶ್ವಾಸಮತ ಯಾಚನೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಶಾಸಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ತಮ್ಮ ಸಿಎಂ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

164–99 ಮತಗಳ ಅಂತರದಲ್ಲಿ ಶಿಂಧೆ ಸರ್ಕಾರ ವಿಶ್ವಾಸ ಗೆದ್ದಿದೆ. 3 ಸದಸ್ಯರು ವಿಧಾನಸಭೆ ಅಧಿವೇಶನಕ್ಕೆ ಗೈರಾಗಿದ್ದರು. ಉದ್ಧವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಮಹಾವಿಕಾಸ ಆಘಾಡಿ ಸರ್ಕಾರದ ವಿರುದ್ಧ ಬಂಡೆದ್ದು, ಬಿಜೆಪಿಯೊಂದಿಗೆ ಸೇರಿ ಶಿಂಧೆ ಅವರು ಮುಖ್ಯಮಂತ್ರಿಯಾಗಿದ್ದರು. ಬಿಜೆಪಿಯ ದೇವೇಂದ್ರ ಫಡಣವೀಸ್ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com