ಚೆನ್ನೈನಲ್ಲಿ ಜುಲೈ 6 ರಿಂದ ಮಾಸ್ಕ್ ಕಡ್ಡಾಯ, ನಿಯಮ ಉಲ್ಲಂಘಿಸುವವರಿಗೆ 500 ರೂ. ದಂಡ

ಚೆನ್ನೈನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮಂಗಳವಾರದಿಂದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚೆನ್ನೈ: ಚೆನ್ನೈನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮಂಗಳವಾರದಿಂದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ.

ಜುಲೈ 6 ರಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ನಿಯಮ ಪಾಲಿಸದವರಿಗೆ 500 ರೂಪಾಯಿ ದಂಡ ವಿಧಿಸಲಾಗುವುದು ಎಂದು ಚೆನ್ನೈ ಮಹಾನಗರ ಪಾಲಿಕೆ ಪ್ರಕಟೆಯಲ್ಲಿ ತಿಳಿಸಿದೆ.

ಮಾಲ್‌ಗಳು, ಥಿಯೇಟರ್‌ಗಳು, ಅಂಗಡಿಗಳು, ಮಾರುಕಟ್ಟೆ ಸ್ಥಳಗಳು ಇತ್ಯಾದಿಗಳ ಮಾಲೀಕರು ತಮ್ಮ ಉದ್ಯೋಗಿಗಳು ಮತ್ತು ಗ್ರಾಹಕರು ಮಾಸ್ಕ್ ಧರಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಸರಿಯಾದ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಮಹಾನಗರ ಪಾಲಿಕೆ ಸೂಚಿಸಿದೆ.

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 13,086 ಹೊಸ ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದ್ದು, 31 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com