ತಮಿಳುನಾಡಿನ ಚೆಂಗಲ್ಪಟ್ಟುನಲ್ಲಿ ಭೀಕರ ಅಪಘಾತ: ಬಸ್ಸು ಲಾರಿಗೆ ಡಿಕ್ಕಿ ಹೊಡೆದು 6 ಮಂದಿ ಸಾವು, 10ಕ್ಕೂ ಅಧಿಕ ಮಂದಿಗೆ ಗಾಯ
ಬಸ್ಸು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟು 10 ಮಂದಿಗೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಮಿಳು ನಾಡಿನ ಚೆಂಗಲ್ಪಟ್ಟುವಿನಲ್ಲಿ ಇಂದು ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
Published: 08th July 2022 11:27 AM | Last Updated: 08th July 2022 01:14 PM | A+A A-

ಬಸ್ಸು ಅಪಘಾತ ನಂತರದ ದೃಶ್ಯ
ಚೆಂಗಲ್ಪಟ್ಟು(ತಮಿಳು ನಾಡು): ಬಸ್ಸು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟು 10 ಮಂದಿಗೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಮಿಳು ನಾಡಿನ ಚೆಂಗಲ್ಪಟ್ಟುವಿನಲ್ಲಿ ಇಂದು ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ನಿಂತಿದ್ದ ಲಾರಿಗೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸರು ಖಚಿತಪಡಿಸಿದ್ದಾರೆ. ಹೆಚ್ಚಿನ ಮಾಹಿತಿ ಸಿಗಬೇಕಿದೆ.