ಮಾಹಿತಿ ಇಲ್ಲದ ಕಾಮೆಂಟ್ ಮಾಡುವುದು ಪ್ರಯೋಜನಕಾರಿಯಲ್ಲ: ಜುಬೇರ್ ಬಂಧನ ಕುರಿತು ಜರ್ಮನಿ ಹೇಳಿಕೆಗೆ ಭಾರತದ ಪ್ರತಿಕ್ರಿಯೆ

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ಆಕ್ಷೇಪಾರ್ಹ ಟ್ವೀಟ್ ಪ್ರಕರಣದ ಬಗ್ಗೆ ನಿಗಾ ವಹಿಸುವುದಾಗಿ ಜರ್ಮನಿ ಹೇಳಿದ ಒಂದು ದಿನದ ನಂತರ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಇದು  ದೇಶೀಯ ವಿಷಯವಾಗಿದ್ದು,  ನ್ಯಾಯಾಂಗ ಪ್ರಕ್ರಿಯೆ ನಡೆಯುತ್ತಿರುವಾಗ ಪ್ರತಿಕ್ರಿಯಿಸುವುದು ಸೂಕ್ತವಲ್ಲ ಎಂದು ಹೇಳಿದೆ.
ಮೊಹಮ್ಮದ್ ಜುಬೈರ್
ಮೊಹಮ್ಮದ್ ಜುಬೈರ್

ನವದೆಹಲಿ: ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ಆಕ್ಷೇಪಾರ್ಹ ಟ್ವೀಟ್ ಪ್ರಕರಣದ ಬಗ್ಗೆ ನಿಗಾ ವಹಿಸುವುದಾಗಿ ಜರ್ಮನಿ ಹೇಳಿದ ಒಂದು ದಿನದ ನಂತರ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಇದು  ದೇಶೀಯ ವಿಷಯವಾಗಿದ್ದು,  ನ್ಯಾಯಾಂಗ ಪ್ರಕ್ರಿಯೆ ನಡೆಯುತ್ತಿರುವಾಗ ಪ್ರತಿಕ್ರಿಯಿಸುವುದು ಸೂಕ್ತವಲ್ಲ ಎಂದು ಹೇಳಿದೆ.

ಈ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಎಂಇಎ ವಕ್ತಾರ ಅರಿಂದಮ್ ಬಾಗ್ಚಿ, ಇದು ದೇಶೀಯ ಸಮಸ್ಯೆ, ಈ ಪ್ರಕರಣದಲ್ಲಿ ನ್ಯಾಯಾಂಗ ಪ್ರಕ್ರಿಯೆ ನಡೆಯುತ್ತಿದೆ. ಭಾರತದ ಅಧೀನದಲ್ಲಿರುವ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುವುದು ಸೂಕ್ತವಲ್ಲ ಎಂದರು.  

ನ್ಯಾಯಾಂಗದ ಸ್ವಾತಂತ್ರ್ಯವನ್ನು ಚೆನ್ನಾಗಿ ಗುರುತಿಸಲಾಗಿದೆ. ನ್ಯಾಯಾಂಗದ ಬಗ್ಗೆ ಮಾಹಿತಿ ಇಲ್ಲದ ಕಾಮೆಂಟ್‌ಗಳು ಪ್ರಯೋಜನಕಾರಿಯಲ್ಲ ಮತ್ತು ಅವುಗಳನ್ನು ತಪ್ಪಿಸಬೇಕು ಎಂದು ಅವರು ಹೇಳಿದರು.

ಮೊಹಮ್ಮದ್ ಜುಬೈರ್ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಜರ್ಮನ್ ವಿದೇಶಾಂಗ ಸಚಿವಾಲಯದ ವಕ್ತಾರರು ಬುಧವಾರ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com