ಅಮರನಾಥ ಗುಹೆ ಬಳಿ ಮೇಘಸ್ಫೋಟ: ಮೃತರ ಕುಟುಂಬ ಸದಸ್ಯರಿಗೆ ಪ್ರಧಾನಿ ಮೋದಿ, ಸೋನಿಯಾ ಗಾಂಧಿ ಸಂತಾಪ

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಪ್ರಸಿದ್ಧ ಪುಣ್ಯಕ್ಷೇತ್ರ ಅಮರನಾಥ ಗುಹೆ ಬಳಿ ಶುಕ್ರವಾರ ಸಂಭವಿಸಿದ ಮೇಘಸ್ಫೋಟದಲ್ಲಿ 13 ಯಾತ್ರಿಗಳ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ದಾರೆ.
ಮೇಘಸ್ಫೋಟ, ಪ್ರಧಾನಿ ಮೋದಿ, ಸೋನಿಯಾ ಗಾಂಧಿ
ಮೇಘಸ್ಫೋಟ, ಪ್ರಧಾನಿ ಮೋದಿ, ಸೋನಿಯಾ ಗಾಂಧಿ

ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಪ್ರಸಿದ್ಧ ಪುಣ್ಯಕ್ಷೇತ್ರ ಅಮರನಾಥ ಗುಹೆ ಬಳಿ ಶುಕ್ರವಾರ ಸಂಭವಿಸಿದ ಮೇಘಸ್ಫೋಟದಲ್ಲಿ 13 ಯಾತ್ರಿಗಳ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಮರನಾಥ ಗುಹೆ ಬಳಿ ಮೇಘಸ್ಫೋಟವಾಗಿರುವುದಕ್ಕೆ ದು;ಖವಾಗಿದೆ. ಮೃತ ಕುಟುಂಬಗಳ ಸದಸ್ಯರಿಗೆ ಸಂತಾಪಗಳು, ಪರಿಸ್ಥಿತಿ ಅವಲೋಕಿಸುತ್ತಿರುವ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡುತ್ತೇನೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ನಡೆಯುತ್ತಿವೆ. ಎಲ್ಲಾ ರೀತಿಯ ನೆರವನ್ನು ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಅಮರನಾಥ ಗುಹೆಯ ಮೇಘಸ್ಫೋಟದಿಂದ ಸಾವನ್ನಪ್ಪಿದ್ದ ಕುಟುಂಬ ಸದಸ್ಯರಿಗೆ  ಸೋನಿಯಾ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮೇಘಸ್ಫೋಟದಿಂದಾಗಿ ಹಲವಾರು ಯಾತ್ರಿಕರ ದುರಂತ ಸಾವಿನ ಬಗ್ಗೆ ತಿಳಿದು ನಾನು ತುಂಬಾ ದುಃಖಿತಳಾಗಿರುವುದಾಗಿ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com