ಆವಂತಿಪೋರಾ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನೆ, ಕಾರ್ಯಾಚರಣೆ ಮುಂದುವರಿಕೆ!
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ನಡೆಯುತ್ತಿರುವ ಎನ್ಕೌಂಟರ್ ನಲ್ಲಿ ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಲಾಗಿದ್ದು, ಆ ಮೂಲಕ ಈ ಎನ್ಕೌಂಟರ್ ನಲ್ಲಿ ಹತರಾದ ಉಗ್ರರ ಸಂಖ್ಯೆ 2ಕ್ಕೇರಿದೆ.
Published: 11th July 2022 03:12 PM | Last Updated: 11th July 2022 04:25 PM | A+A A-

ಸೇನಾ ಎನ್ ಕೌಂಟರ್
ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ನಡೆಯುತ್ತಿರುವ ಎನ್ಕೌಂಟರ್ ನಲ್ಲಿ ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಲಾಗಿದ್ದು, ಆ ಮೂಲಕ ಈ ಎನ್ಕೌಂಟರ್ ನಲ್ಲಿ ಹತರಾದ ಉಗ್ರರ ಸಂಖ್ಯೆ 2ಕ್ಕೇರಿದೆ.
ಆವಂತಿಪೋರಾದ ವಂಡಕ್‌ಪೋರಾ ಪ್ರದೇಶದಲ್ಲಿ ಸೋಮವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದಿರುವುದಾಗಿ ಭದ್ರತಾ ಪಡೆಗಳೊಂದಿಗೆ ಪೊಲೀಸರು ಸೋಮವಾರ ಹೇಳಿದ್ದಾರೆ.
ಇದನ್ನೂ ಓದಿ: ಅಮರನಾಥ ಪ್ರವಾಹ: ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ಸೇನೆಯಿಂದ ಅತ್ಯಾಧುನಿಕ ಯಂತ್ರೋಪಕರಣಗಳ ಬಳಕೆ
ಭಾನುವಾರದಿಂದ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ಸೋಮವಾರವೂ ಕೂಡ ಮುಂದುವರೆದಿದ್ದು, ಇಂದು ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ. ಆ ಮೂಲಕ ಈ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಘಟನಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದ್ದು, ಮತ್ತಷ್ಟು ಉಗ್ರರು ಅವಿತಿರುವ ಶಂಕೆ ಇದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಪ್ರತ್ಯೇಕ ಹೇಳಿಕೆಯಲ್ಲಿ ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಅವರು ಕೂಡ ಈ ಬಗ್ಗೆ ಮಾಹಿತಿ ನೀಡಿದ್ದು, "ಜೆಇಎಂ ಭಯೋತ್ಪಾದಕ ಸಂಘಟನೆಯ ಕುಖ್ಯಾತ ಭಯೋತ್ಪಾದಕ ಕೈಸರ್ ಕೋಕಾ 2018 ರಿಂದ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿದ್ದ. ಹಾಲಿ ಎನ್‌ಕೌಂಟರ್‌ನಲ್ಲಿ ಆತ ಸಿಕ್ಕಿಬಿದ್ದಿದ್ದಾನೆ" ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮೇಘಸ್ಪೋಟವಾದ ಹತ್ತೇ ನಿಮಿಷದಲ್ಲಿ ಪ್ರವಾಹದ ನೀರು ನುಗ್ಗಿತು: ಅಮರನಾಥ ಯಾತ್ರಿಕರ ಕರಾಳ ಅನುಭವ
ಉಗ್ರರ ಇರುವಿಕೆ ಸುಳಿವಿನ ಮೇರೆಗೆ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದ ನಂತರ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಹೇಳಿದ್ದಾರೆ.