ರಾಷ್ಟ್ರೀಯ ಲಾಂಛನ ವಿವಾದ: ನಾವು ಎತ್ತ ಸಾಗುತ್ತಿದ್ದೇವೆ?- ನಟ ಪ್ರಕಾಶ್ ರೈ

ದೆಹಲಿಯ ಹೊಸ ಸಂಸತ್ ಭವನದ ಮೇಲಿನ ರಾಷ್ಟ್ರೀಯ ಲಾಂಛನ ವಿವಾದಕ್ಕೆ ಸಂಬಂಧಿಸಿದಂತೆ ತೀವ್ರ ಅಸಮಾಧಾನ ವ್ಯಕ್ತಿಪಡಿಸಿರುವ ಬಹುಭಾಷಾ ನಟ ಪ್ರಕಾಶ್ ರೈ ಅವರು, ನಾವು ಎತ್ತ ಸಾಗುತ್ತಿದ್ದೇವೆ ಎಂದು ಪ್ರಶ್ನಿಸುವ ಮೂಲಕ ಆಡಳಿತಾರೂಢ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಪ್ರಕಾಶ್ ರೈ
ಪ್ರಕಾಶ್ ರೈ

ಚೆನ್ನೈ: ದೆಹಲಿಯ ಹೊಸ ಸಂಸತ್ ಭವನದ ಮೇಲಿನ ರಾಷ್ಟ್ರೀಯ ಲಾಂಛನ ವಿವಾದಕ್ಕೆ ಸಂಬಂಧಿಸಿದಂತೆ ತೀವ್ರ ಅಸಮಾಧಾನ ವ್ಯಕ್ತಿಪಡಿಸಿರುವ ಬಹುಭಾಷಾ ನಟ ಪ್ರಕಾಶ್ ರೈ ಅವರು, ನಾವು ಎತ್ತ ಸಾಗುತ್ತಿದ್ದೇವೆ ಎಂದು ಪ್ರಶ್ನಿಸುವ ಮೂಲಕ ಆಡಳಿತಾರೂಢ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

"ನಾವು ಎತ್ತ ಹೋಗುತ್ತಿದ್ದೇವೆ... #justasking" ಎಂದು ಪ್ರಕಾಶ್ ರೈ ಟ್ವೀಟ್ ಮಾಡಿದ್ದಾರೆ. ತಮಿಳು, ಹಿಂದಿ ಮತ್ತು ತೆಲುಗು ಚಲನಚಿತ್ರಗಳಲ್ಲಿ ನಟಿಸಿರುವ ಪ್ರಕಾಶ್ ರೈ, ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಗುರುವಾರ, ಈ 'ಹಿಂದೆ' ಮತ್ತು 'ಈಗ' ಭಗವಾನ್ ರಾಮ ಮತ್ತು ಭಗವಾನ್ ಹನುಮಂತನ ಸಾಂಪ್ರದಾಯಿಕ ಮತ್ತು ಅಸಂಪ್ರದಾಯಿಕ ಚಿತ್ರಗಳನ್ನು ಪೋಸ್ಟ್ ಮಾಡಿದ್ದು, ನಂತರ ಹೊಸ ಸಂಸತ್ತಿನ ಕಟ್ಟಡದ ಮೇಲೆ ಸ್ಥಾಪಿಸಲಾದ ರಾಷ್ಟ್ರೀಯ ಲಾಂಛನದ ತುಲನಾತ್ಮಕ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.

ಕಳೆದ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ ನೂತನ ಸಂಸತ್ ಭವನದ ಮೇಲಿನ ರಾಷ್ಟ್ರೀಯ ಲಾಂಛನ ಹೊಸ ವಿವಾದ ಸೃಷ್ಟಿಸಿದೆ. ಕಾರ್ಯಾಂಗದ ಮುಖ್ಯಸ್ಥರಾಗಿರುವ ಪ್ರಧಾನಿ, ಈ ಲಾಂಛನವನ್ನು ಅನಾವರಣ ಮಾಡಿದ್ದು ಏಕೆ ಎಂದು ವಿರೋಧ ಪಕ್ಷಗಳು ಪ್ರಶ್ನಿಸಿವೆ. ರಾಷ್ಟ್ರೀಯ ಲಾಂಛನವನ್ನು ಮಾರ್ಪಡಿಸಲಾಗಿದೆ ಮತ್ತು ಅವಮಾನಿಸಲಾಗಿದೆ ಎಂದು ವಿಪಕ್ಷಗಳು ಆರೋಪಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com