ಧಾರ್ಮಿಕ ಭಾವನೆಗಳಿಗೆ ಧಕ್ಕೆ ಪ್ರಕರಣ: ಮೊಹಮ್ಮದ್ ಜುಬೇರ್ ಗೆ 14 ದಿನ ನ್ಯಾಯಾಂಗ ಬಂಧನ

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆಲ್ಟ್‌ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರನ್ನು ಹತ್ರಾಸ್ ನ್ಯಾಯಾಲಯವು ಗುರುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಮೊಹಮ್ಮದ್ ಜುಬೈರ್
ಮೊಹಮ್ಮದ್ ಜುಬೈರ್

ನವದೆಹಲಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆಲ್ಟ್‌ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರನ್ನು ಹತ್ರಾಸ್ ನ್ಯಾಯಾಲಯವು ಗುರುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಜೂನ್ 10 ರಂದು ಶುಕ್ರವಾರದ ಪ್ರಾರ್ಥನೆಯ ನಂತರ ಪರ್ದಿಲ್ ನಗರ ಪಟ್ಟಣದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ, ಧರ್ಮದ ಆಧಾರದ ಮೇಲೆ ಎರಡು ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸುವ ಟ್ವಿಟರ್ ಪೋಸ್ಟ್‌ ಸಂಬಂಧ ಮೊಹಮ್ಮದ್ ಜುಬೇರ್ ವಿರುದ್ಧ ಕೇಸ್ ದಾಖಲಿಸಲಾಗಿದೆ.

2017 ರಲ್ಲಿ ಜುಬೈರ್ ಅವರು ಮಾಡಿದ ಟ್ವಿಟರ್ ಪೋಸ್ಟ್ ಸಂಬಂಧ ಕಳೆದ ತಿಂಗಳು ದೆಹಲಿ ಪೊಲೀಸರು ಅವರನ್ನು ಬಂಧಿಸಿದ್ದರು. ನಂತರ ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳು ಮತ್ತು ಎಫ್‌ಐಆರ್ ಗಳ ಕಾರಣ ಇಂದು ಹತ್ರಾಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಇತ್ತೀಚೆಗೆ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ಹತ್ರಾಸ್ ಮೊಹಮ್ಮದ್ ಜುಬೇರ್ ವಿರುದ್ಧ ಬಿ ವಾರಂಟ್ ಹೊರಡಿಸಿತ್ತು.

ಹಿಂದೂ ಶೇರ್ ಸೇನೆಯ ಜಿಲ್ಲಾಧ್ಯಕ್ಷ ಭಗವಾನ್ ಶರಣ್ ಅವರ ದೂರಿನ ಮೇರೆಗೆ ಜೂನ್ 1 ರಂದು ಭಾರತೀಯ ದಂಡ ಸಂಹಿತೆ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 ರ ಅಡಿಯಲ್ಲಿ ಸೀತಾಪುರದಲ್ಲಿ ಜುಬೇರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com