8 ವರ್ಷಗಳಲ್ಲಿ ಬಲವಂತವಾಗಿ 14 ಬಾರಿ ಗರ್ಭಪಾತ: ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಮಹಿಳೆ ಆತ್ಮಹತ್ಯೆ!

ಎಂಟು ವರ್ಷದ ಲಿವ್ ಇನ್ ರಿಲೇಷನ್ ನಲ್ಲಿ 14 ಬಾರಿ ಗರ್ಭಪಾತಕ್ಕೊಳಗಾಗಿದ್ದ ಮಹಿಳೆ ಕೊನೆಗೆ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಜುಲೈ 5 ರಂದು ಆಗ್ನೇಯ ದೆಹಲಿಯ ಜೈತ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಎಂಟು ವರ್ಷದ ಲಿವ್ ಇನ್ ರಿಲೇಷನ್ ನಲ್ಲಿ 14 ಬಾರಿ ಗರ್ಭಪಾತಕ್ಕೊಳಗಾಗಿದ್ದ ಮಹಿಳೆ ಕೊನೆಗೆ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಜುಲೈ 5 ರಂದು ಆಗ್ನೇಯ ದೆಹಲಿಯ ಜೈತ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಂಟು ವರ್ಷಗಳ ಅವಧಿಯಲ್ಲಿ 33 ವರ್ಷದ ಮಹಿಳೆಯೊಬ್ಬರು ತಮ್ಮ ಲಿವ್-ಇನ್ ಪಾಲುದಾರರಿಂದ 14 ಬಾರಿ ಗರ್ಭಪಾತಕ್ಕೆ ಒಳಗಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆಯ ಭರವಸೆಯ ಮೇರೆಗೆ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ ವ್ಯಕ್ತಿಯೊಂದಿಗೆ ಲಿವ್-ಇನ್ ಸಂಬಂಧ ಹೊಂದಿದ್ದ, ಕೊನೆಗೆ ಮದುವೆಯಾಗಲು ನಿರಾಕರಿಸಿದ್ದಾನೆ. ಹೀಗಾಗಿ ನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮಹಿಳೆ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.

ಮಹಿಳೆ ತನ್ನ ಪತಿಯಿಂದ ಸುಮಾರು 7-8 ವರ್ಷಗಳಿಂದ ದೂರವಾಗಿದ್ದಳೆಂದು ಪೊಲೀಸರು ತಿಳಿಸಿದ್ದಾರೆ. ನೋಯ್ಡಾದ ಸಾಫ್ಟ್ ವೇರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ .

ಬಿಹಾರದ ಮುಜಾಫರ್‌ಪುರದಲ್ಲಿ ನೆಲೆಸಿರುವ ಆಕೆಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಅವರಿಗೆ ಹಸ್ತಾಂತರಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ), 376 (ಅತ್ಯಾಚಾರ) ಮತ್ತು 313 (ಮಹಿಳೆಯ ಒಪ್ಪಿಗೆಯಿಲ್ಲದೆ ಗರ್ಭಪಾತಕ್ಕೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com