ನಿರ್ಮಾಣ ಹಂತದ ಗೋಡಾನ್ ಗೋಡೆ ಕುಸಿತ
ನಿರ್ಮಾಣ ಹಂತದ ಗೋಡಾನ್ ಗೋಡೆ ಕುಸಿತ

ದೆಹಲಿಯಲ್ಲಿ ನಿರ್ಮಾಣ ಹಂತದ ಗೋಡೌನ್ ಗೋಡೆ ಕುಸಿತ: ಐವರು ಸಾವು; ಮೋದಿ ಸಂತಾಪ

ನಿರ್ಮಾಣ ಹಂತದಲ್ಲಿರುವ ಗೋಡೌನ್ ಗೋಡೆ ಕುಸಿದು ಕನಿಷ್ಠ ಐವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ದೆಹಲಿಯ ಅಲಿಪುರ ಪ್ರದೇಶದಲ್ಲಿ ನಡೆದಿದೆ.
Published on

ನವದೆಹಲಿ: ನಿರ್ಮಾಣ ಹಂತದಲ್ಲಿರುವ ಗೋಡೌನ್ ಗೋಡೆ ಕುಸಿದು ಕನಿಷ್ಠ ಐವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ದೆಹಲಿಯ ಅಲಿಪುರ ಪ್ರದೇಶದಲ್ಲಿ ನಡೆದಿದೆ.

ರಾಜಾ ಹರೀಶ್ ಚಂದ್ ಆಸ್ಪತ್ರೆಯಲ್ಲಿ ಒಟ್ಟು ಒಂಬತ್ತು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ, ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಮತ್ತು ಉಳಿದ ಏಳು ಜನರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಬಕೋಲಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಗೋಡೆ ಕುಸಿದಿರುವ ಬಗ್ಗೆ ಇಂದು ಮಧ್ಯಾಹ್ನ 12.40ಕ್ಕೆ ಅಲಿಪುರದ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಬಂದಿತ್ತು. ನಿರ್ಮಾಣ ಹಂತದಲ್ಲಿರುವ ಗೋದಾಮಿನ 100 ಅಡಿ ಉದ್ದ ಮತ್ತು 15 ಅಡಿ ಎತ್ತರದ ಗೋಡೆ ಕುಸಿದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಗೋಡೆಯ ಪಕ್ಕದಲ್ಲಿ ಅಡಿಪಾಯವನ್ನು ಅಗೆಯುತ್ತಿದ್ದ ಕನಿಷ್ಠ 20 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದರು ಮತ್ತು 13 ಕಾರ್ಮಿಕರನ್ನು ನರೇಲಾದ ಎಸ್ ಎಚ್ ಆರ್ ಸಿಗೆ ಸ್ಥಳಾಂತರಿಸಲಾಯಿತು.

ಪ್ರಧಾನಿ ಮೋದಿ ಸಂತಾಪ
ದೆಹಲಿಯ ಅಲಿಪುರದಲ್ಲಿ ಸಂಭವಿಸಿದ ದುರ್ಘಟನೆಯಿಂದ ತೀವ್ರ ನೋವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. “ದೆಹಲಿಯ ಅಲಿಪುರದಲ್ಲಿ ಸಂಭವಿಸಿದ ದುರ್ಘಟನೆಯಿಂದ ದುಃಖವಾಗಿದೆ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಜೊತೆಯಲ್ಲಿವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪಿಎಂಒ ಕಚೇರಿ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com