ನವದೆಹಲಿ: ದೇಶದ ಮೊದಲ ಮಂಕಿಪಾಕ್ಸ್ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಂಕಿಪಾಕ್ಸ್ ನಿರ್ವಹಣೆಗೆ ಸಂಬಂಧಿಸಿದಂತೆ ಶುಕ್ರವಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಯುಎಇಯಿಂದ ಹಿಂದಿರುಗಿದ ಕೇರಳ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಇಡೀ ದೇಶದಲ್ಲೇ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತಿಳಿಸಿದ್ದರು.
ರೋಗಿಯು ಜುಲೈ 12 ರಂದು ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದರು.
ಮಾರ್ಗಸೂಚಿಗಳು
Advertisement