ಪರೀಕ್ಷಾ ಕೇಂದ್ರ ಬದಲಾವಣೆಯಿಂದ ಸಿಯುಇಟಿ ತಪ್ಪಿಸಿಕೊಂಡವರಿಗೆ ಮತ್ತೊಂದು ಅವಕಾಶ: ಎನ್ ಟಿಎ
ಪರೀಕ್ಷಾ ಕೇಂದ್ರಗಳ ಬದಲಾವಣೆಯಿಂದಾಗಿ ಮೊದಲ ದಿನದ ನಿರ್ಣಾಯಕ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ-ಯುಜಿ(ಸಿಯುಇಟಿ)ಯ ಆಕಾಂಕ್ಷಿಗಳಿಗೆ ಆಗಸ್ಟ್‌ನಲ್ಲಿ ಎರಡನೇ ಹಂತದಲ್ಲಿ ಮತ್ತೊಂದು...
Published: 15th July 2022 04:16 PM | Last Updated: 15th July 2022 04:16 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಪರೀಕ್ಷಾ ಕೇಂದ್ರಗಳ ಬದಲಾವಣೆಯಿಂದಾಗಿ ಮೊದಲ ದಿನದ ನಿರ್ಣಾಯಕ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ-ಯುಜಿ(ಸಿಯುಇಟಿ)ಯ ಆಕಾಂಕ್ಷಿಗಳಿಗೆ ಆಗಸ್ಟ್‌ನಲ್ಲಿ ಎರಡನೇ ಹಂತದಲ್ಲಿ ಮತ್ತೊಂದು ಅವಕಾಶ ನೀಡಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಮತ್ತು ಪಂಜಾಬ್‌ನ ಪಠಾಣ್‌ಕೋಟ್‌ನ ಎರಡು ಕೇಂದ್ರಗಳಲ್ಲಿ ತಾಂತ್ರಿಕ ಸಮಸ್ಯೆಗಳಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.
ಇದನ್ನು ಓದಿ: ತಮಿಳುನಾಡು ವಿಧಾನಸಭೆಯಲ್ಲಿ ಕೇಂದ್ರದ ಸಿಯುಇಟಿ ವಿರುದ್ಧ ನಿರ್ಣಯ ಅಂಗೀಕಾರ
"ಎರಡು ಕೇಂದ್ರಗಳಲ್ಲಿ ಹಾಜರಾಗಬೇಕಿದ್ದ 190ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಆಗಸ್ಟ್‌ನಲ್ಲಿ ಎರಡನೇ ಹಂತದಲ್ಲಿ ಹಾಜರಾಗಲು ಅವಕಾಶವಿಲ್ಲ. ಆದರೆ ಇತರ ಕೇಂದ್ರಗಳಲ್ಲಿ, ಪರೀಕ್ಷಾ ಕೇಂದ್ರಗಳ ಬದಲಾವಣೆಯಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗುವುದು" ಎಂದು ಎನ್‌ಟಿಎ ಹಿರಿಯ ಅಧಿತಾಕಿಯೊಬ್ಬರು ತಿಳಿಸಿದ್ದಾರೆ.
ಕಾಮನ್ ಯೂನಿವರ್ಸಿಟಿ ಪ್ರವೇಶ ಪರೀಕ್ಷೆ(CUET)-UGಯ ಚೊಚ್ಚಲ ಆವೃತ್ತಿಯು ಭಾರತ ಮತ್ತು ವಿದೇಶಗಳಲ್ಲಿ 510ಕ್ಕೂ ಹೆಚ್ಚು ನಗರಗಳಲ್ಲಿ ಶುಕ್ರವಾರ ಪ್ರಾರಂಭವಾಗಿದೆ.
ಈ ಪರೀಕ್ಷೆಯನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತಿದೆ. ಜುಲೈನಲ್ಲಿ ಮೊದಲ ಹಂತದ ಪರೀಕ್ಷೆ ನಡೆಯುತ್ತಿದ್ದು, ಆಗಸ್ಟ್ ನಲ್ಲಿ ಎರಡನೇ ಹಂತದ ಪರೀಕ್ಷೆ ನಡೆಯಲಿದೆ.