ರಾಷ್ಟ್ರಪತಿ ಚುನಾವಣೆ: ಮುರ್ಮು ಗೌರವಿಸುತ್ತೇವೆ, ಆದರೆ ಯುಪಿಎ ಅಭ್ಯರ್ಥಿ ಯಶ್ವಂತ್ ಸಿನ್ಹಾಗೆ ನಮ್ಮ ಬೆಂಬಲ- ಆಮ್ ಆದ್ಮಿ ಪಕ್ಷ
ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ದೆಹಲಿ ಮತ್ತು ಪಂಜಾಬ್ ನ ಆಢಳಿತಾರೂಢ ಆಮ್ ಆದ್ಮಿ ಪಕ್ಷ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯಶ್ವಂತ್ ಸಿನ್ಹಾ ಅವರಿಗೆ ಬೆಂಬಲ ಘೋಷಣೆ ಮಾಡಿದೆ.
Published: 16th July 2022 02:41 PM | Last Updated: 16th July 2022 03:29 PM | A+A A-

ಯಶ್ವಂತ್ ಸಿನ್ಹಾ ಮತ್ತು ಅರವಿಂದ್ ಕೇಜ್ರಿವಾಲ್
ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ದೆಹಲಿ ಮತ್ತು ಪಂಜಾಬ್ ನ ಆಢಳಿತಾರೂಢ ಆಮ್ ಆದ್ಮಿ ಪಕ್ಷ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯಶ್ವಂತ್ ಸಿನ್ಹಾ ಅವರಿಗೆ ಬೆಂಬಲ ಘೋಷಣೆ ಮಾಡಿದೆ.
ರಾಷ್ಟ್ರಪತಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸಲಿದೆ ಎಂದು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಶನಿವಾರ ಪಕ್ಷದ ರಾಜಕೀಯ ಸಲಹಾ ಸಮಿತಿ ಸಭೆಯ ನಂತರ ತಿಳಿಸಿದ್ದಾರೆ. ಸಿನ್ಹಾ ಅವರು ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಿಂದ ಆಯ್ಕೆಯಾದ ಅಭ್ಯರ್ಥಿ ದ್ರೌಪದಿ ಮುರ್ಮು ಅವರೊಂದಿಗೆ ದೇಶದ ಉನ್ನತ ಸಾಂವಿಧಾನಿಕ ಹುದ್ದೆಗೆ ಕಣದಲ್ಲಿದ್ದಾರೆ.
ಇದನ್ನೂ ಓದಿ: ನಾನು ಬೆಂಬಲ ಕೇಳಲು ಯತ್ನಿಸಿದಾಗ ಕರೆ ಸ್ವೀಕರಿಸಲೂ ನಿತೀಶ್ ನಿರಾಕರಿಸಿದ್ದರು: ರಾಷ್ಟ್ರಪತಿ ಅಭ್ಯರ್ಥಿ ಯಶ್ವಂತ್ ಸಿನ್ಹಾ
"ನಾವು ದ್ರೌಪದಿ ಮುರ್ಮು ಅವರನ್ನು ಗೌರವಿಸುತ್ತೇವೆ. ಆದರೆ ಆಪ್ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುತ್ತೇವೆ ಎಂದು ಸಿಂಗ್ ಹೇಳಿದರು.
ಸಭೆಯಲ್ಲಿ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್, ಪಂಜಾಬ್ ಸಂಸದ ರಾಘವ್ ಚಡ್ಡಾ, ಶಾಸಕ ಅತಿಶಿ ಮತ್ತು ಪಿಎಸಿಯ ಇತರ ಸದಸ್ಯರು ಭಾಗವಹಿಸಿದ್ದರು.
ರಾಷ್ಟ್ರಪತಿ ಚುನಾವಣೆಗೆ ಸೋಮವಾರ ಮತದಾನ ನಡೆಯಲಿದ್ದು, ಅಗತ್ಯ ಬಿದ್ದರೆ ಮತ ಎಣಿಕೆ ಮಾಡಲಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.
ಇನ್ನು ದೆಹಲಿ ಮತ್ತು ಪಂಜಾಬ್ ಎಂಬ ಎರಡು ರಾಜ್ಯಗಳಲ್ಲಿ ಸರ್ಕಾರಗಳನ್ನು ಹೊಂದಿರುವ ಏಕೈಕ ಬಿಜೆಪಿಯೇತರ, ಕಾಂಗ್ರೆಸ್ಸೇತರ ಪಕ್ಷ ಎಎಪಿ. ಇದು ದೆಹಲಿಯ ಮೂವರು ಸೇರಿದಂತೆ ಎರಡು ರಾಜ್ಯಗಳ 10 ರಾಜ್ಯಸಭಾ ಸಂಸದರನ್ನು ಹೊಂದಿದೆ. ಅಲ್ಲದೆ, ಪಕ್ಷವು ಪಂಜಾಬ್‌ನಲ್ಲಿ 92, ದೆಹಲಿಯಲ್ಲಿ 62 ಮತ್ತು ಗೋವಾದಲ್ಲಿ ಇಬ್ಬರು ಸೇರಿದಂತೆ ಒಟ್ಟು 156 ಶಾಸಕರನ್ನು ಹೊಂದಿದೆ.