ಸುಮಾರು 51 ಲಕ್ಷ ಮನೆಗಳಿಗೆ ಶೂನ್ಯ ವಿದ್ಯುತ್ ಬಿಲ್: ಪಂಜಾಬ್ ಸಿಎಂ ಭಗವಂತ್ ಮಾನ್
ರಾಜ್ಯದಲ್ಲಿ ಸುಮಾರು 51 ಲಕ್ಷ ಕುಟುಂಬಗಳು ಶೂನ್ಯ ವಿದ್ಯುತ್ ಬಿಲ್ ಪಡೆಯಲಿವೆ ಮತ್ತು 300 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಭರವಸೆಯನ್ನು ಜುಲೈ 1 ರಿಂದ ಜಾರಿಗೆ ತರಲಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್...
Published: 16th July 2022 08:11 PM | Last Updated: 16th July 2022 08:11 PM | A+A A-

ಭಗವಂತ್ ಮಾನ್
ಚಂಡೀಗಢ: ರಾಜ್ಯದಲ್ಲಿ ಸುಮಾರು 51 ಲಕ್ಷ ಕುಟುಂಬಗಳು ಶೂನ್ಯ ವಿದ್ಯುತ್ ಬಿಲ್ ಪಡೆಯಲಿವೆ ಮತ್ತು 300 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಭರವಸೆಯನ್ನು ಜುಲೈ 1 ರಿಂದ ಜಾರಿಗೆ ತರಲಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಶನಿವಾರ ಹೇಳಿದ್ದಾರೆ
“ವಿದ್ಯುತ್ ಖಾತರಿಗೆ ಸಂಬಂಧಿಸಿದಂತೆ ನಾನು ಪಂಜಾಬಿಗಳಿಗೆ ಸಿಹಿ ಸುದ್ದಿ ಕೊಡುತ್ತಿದ್ದೇನೆ. ಉಚಿತ ವಿದ್ಯುತ್ ಭರವಸೆ ಜುಲೈ 1 ರಿಂದ ಜಾರಿಗೆ ಬಂದಿದೆ. ಜುಲೈ-ಆಗಸ್ಟ್‌ನ (ವಿದ್ಯುತ್) ಬಿಲ್ ಸೆಪ್ಟೆಂಬರ್ ಮೊದಲ ವಾರದಲ್ಲಿ ಬರಲಿದೆ. ಈ ವೇಳೆ ಸುಮಾರು 51 ಲಕ್ಷ ಮನೆಗಳು ಶೂನ್ಯ ವಿದ್ಯುತ್ ಬಿಲ್‌ಗಳನ್ನು ಪಡೆಯಲಿವೆ. ನಾವು ಏನು ಹೇಳುತ್ತೇವೆಯೋ ಅದನ್ನು ಮಾಡುತ್ತೇವೆ" ಎಂದು ಪಂಜಾಬ್ ಸಿಎಂ ಮಾನ್ ಟ್ವೀಟ್ ಮಾಡಿದ್ದಾರೆ.
ಇದನ್ನು ಓದಿ: ರಾಷ್ಟ್ರಪತಿ ಚುನಾವಣೆ: ಮುರ್ಮು ಗೌರವಿಸುತ್ತೇವೆ, ಆದರೆ ಯುಪಿಎ ಅಭ್ಯರ್ಥಿ ಯಶ್ವಂತ್ ಸಿನ್ಹಾಗೆ ನಮ್ಮ ಬೆಂಬಲ- ಆಮ್ ಆದ್ಮಿ ಪಕ್ಷ
ಎಎಪಿ ನೇತೃತ್ವದ ಪಂಜಾಬ್ ಸರ್ಕಾರ ಜುಲೈ 1 ರಿಂದ ಪ್ರತಿ ಮನೆಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಈ ಹಿಂದೆ ಘೋಷಿಸಿತ್ತು. 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಪಂಜಾಬ್ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಆಮ್ ಆದ್ಮಿ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಅದನ್ನು ಈಗ ಜಾರಿಗೆ ತರಲಾಗಿದೆ.
ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಕಳೆದ ವರ್ಷ ಜೂನ್‌ನಲ್ಲಿ ಪಂಜಾಬ್ ನಲ್ಲಿ ಪ್ರತಿ ಮನೆಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದರು. ಅಲ್ಲದೆ ಬಾಕಿ ಉಳಿದಿರುವ ವಿದ್ಯುತ್ ಬಿಲ್‌ಗಳನ್ನು ಮನ್ನಾ ಮಾಡುವುದಾಗಿ ಮತ್ತು ರಾಜ್ಯದಲ್ಲಿ ರಾತ್ರಿಯಿಡೀ ವಿದ್ಯುತ್ ಸರಬರಾಜು ಮಾಡುವುದಾಗಿ ಕೇಜ್ರಿವಾಲ್ ಭರವಸೆ ನೀಡಿದ್ದರು.