ಗೊಗೋಯ್ ಟ್ವೀಟ್‌: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್ ದಾಖಲು

'ಅಸ್ಸಾಮಿ ಜನರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರ ವಿರುದ್ಧ ಅಸ್ಸಾಂನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಮೆಹುವಾ ಮೊಯಿತ್ರಾ
ಮೆಹುವಾ ಮೊಯಿತ್ರಾ

ಗುವಾಹಟಿ: 'ಅಸ್ಸಾಮಿ ಜನರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರ ವಿರುದ್ಧ ಅಸ್ಸಾಂನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ 'ಗೊಗೋಯ್' ಉಪನಾಮವನ್ನು ಬಳಸಿದ ಮೊಯಿತ್ರಾ ಅವರು ಬೇಷರತ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ ಶಿವಸಾಗರ್ ಜಿಲ್ಲೆಯಲ್ಲಿ ರಾಷ್ಟ್ರೀಯ ಸಂಗ್ರಾಮಿ ಸೇನಾ, ಅಸೋಮ್ ಟಿಎಂಸಿ ಸಂಸದೆ ವಿರುದ್ಧ ಪೊಲೀಸರಿಗೆ ದೂರು ನೀಡಿತ್ತು. ಈ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

"ಅಸಂಸದೀಯ ಪದಗಳ ಕುರಿತ ತಮ್ಮ ಸರಣಿ ಟ್ವೀಟ್ ನಲ್ಲಿ, ನಿಷೇಧಿತ ಪದ - ಲೈಂಗಿಕ ಕಿರುಕುಳದ ಬದಲಿ ಪದ- ಮಿ. ಗೊಗೋಯ್" ಎಂದು ಮಹುವಾ ಮೊಯಿತ್ರಾ ಅವರು ವಿವಾದಾತ್ಮಕ ಟ್ವೀಟ್ ಮಾಡಿದ್ದರು.

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಅಂತಹ ಯಾವುದೇ ಬದಲಾವಣೆಯನ್ನು ಮಾಡಲಾಗಿಲ್ಲ ಎಂದು ಸ್ಪಷ್ಟವಾಗಿ ನಿರಾಕರಿಸಿದರೂ, ಸಂಸತ್ತಿನಲ್ಲಿ ಕೆಲವು ಪದಗಳನ್ನು ಬಳಸದಂತೆ 'ನಿಷೇಧಿಸಿರುವ' ವರದಿಯನ್ನು ಉಲ್ಲೇಖಿಸಿ ಮಹುವಾ ಅವರು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com