ಉಪ ರಾಷ್ಟ್ರಪತಿ ಚುನಾವಣೆ: ಪ.ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಎನ್ ಡಿಎ ಅಭ್ಯರ್ಥಿ
ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ಜನತಾ ಪಕ್ಷ ಉಪ ರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ರನ್ನು ತನ್ನ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.
Published: 16th July 2022 08:12 PM | Last Updated: 16th July 2022 08:22 PM | A+A A-

ಪ.ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ಜನತಾ ಪಕ್ಷ ಉಪ ರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ರನ್ನು ತನ್ನ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.
Attending the press conference at BJP HQ. https://t.co/NeTblHSlVF
— Jagat Prakash Nadda (@JPNadda) July 16, 2022
ಈ ಕುರಿತಂತೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಪಶ್ಚಿಮ ಬಂಗಾಳದ ಹಾಲಿ ರಾಜ್ಯಪಾಲರಾಗಿರುವ ಜಗದೀಪ್ ಧಂಖರ್ ರನ್ನು ಉಪ ರಾಷ್ಟ್ರಪತಿ ಚುನಾವಣೆ ಎನ್ ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಮುರ್ಮು ಗೌರವಿಸುತ್ತೇವೆ, ಆದರೆ ಯುಪಿಎ ಅಭ್ಯರ್ಥಿ ಯಶ್ವಂತ್ ಸಿನ್ಹಾಗೆ ನಮ್ಮ ಬೆಂಬಲ- ಆಮ್ ಆದ್ಮಿ ಪಕ್ಷ
Watch | BJP National President JP Nadda announces #JagdeepDhankhar as NDA's candidate for the #VicePresidentialElections2022 @jdhankhar1 pic.twitter.com/BTM9EF1pIz
— DD News (@DDNewslive) July 16, 2022
ಈ ಹಿಂದೆ ಕರ್ನಾಟಕ, ಆಂಧ್ರ ಪ್ರದೇಶ ಬಿಜೆಪಿಯ ಹಲವು ನಾಯಕರ ಹೆಸರುಗಳು ಉಪ ರಾಷ್ಟ್ರಪತಿ ಅಭ್ಯರ್ಥಿ ಪಟ್ಟಿಯಲ್ಲಿ ಕೇಳಿ ಬಂದಿತ್ತಾದರೂ ಅಂತಿಮವಾಗಿ ಜಗದೀಪ್ ಧಂಖರ್ ರನ್ನು ಉಪ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ನಾನು ಬೆಂಬಲ ಕೇಳಲು ಯತ್ನಿಸಿದಾಗ ಕರೆ ಸ್ವೀಕರಿಸಲೂ ನಿತೀಶ್ ನಿರಾಕರಿಸಿದ್ದರು: ರಾಷ್ಟ್ರಪತಿ ಅಭ್ಯರ್ಥಿ ಯಶ್ವಂತ್ ಸಿನ್ಹಾ
ಶನಿವಾರ ಸಂಜೆ ನಡೆದ ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಂಸದೀಯ ಮಂಡಳಿಯು ಬಿಜೆಪಿಯ ಅತ್ಯುನ್ನತ ಸಾಂಸ್ಥಿಕ ಸಂಸ್ಥೆಯಾಗಿದೆ ಮತ್ತು ಅದರ ಸದಸ್ಯರಲ್ಲಿ ಮೋದಿ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರಲ್ಲದೆ ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಇತರರು ಇದ್ದಾರೆ.
ಇದನ್ನೂ ಓದಿ: ರಾಷ್ಟ್ರಪತಿ ಅಭ್ಯರ್ಥಿಗಳು ಜಮ್ಮು ಮತ್ತು ಕಾಶ್ಮೀರದ 9,280 ಮತಗಳನ್ನು ಕಳೆದುಕೊಳ್ಳಲಿದ್ದಾರೆ
ಹಾಲಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳಲಿದ್ದು, ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದ್ದು, ಆಗಸ್ಟ್ 6 ರಂದು ಚುನಾವಣೆ ನಿಗದಿಯಾಗಿದೆ.