ತಾಂತ್ರಿಕ ದೋಷ: ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಭಾರತದ ಮತ್ತೊಂದು ವಿಮಾನ!

ತಾಂತ್ರಿಕ ದೋಷದಿಂದಾಗಿ ಭಾರತದ ಮತ್ತೊಂದು ಪ್ರಯಾಣಿಕ ವಿಮಾನವೊಂದು ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಭಾನುವಾರ ನಡೆದಿದೆ.
ಇಂಡಿಗೋ ವಿಮಾನ
ಇಂಡಿಗೋ ವಿಮಾನ

ನವದೆಹಲಿ: ತಾಂತ್ರಿಕ ದೋಷದಿಂದಾಗಿ ಭಾರತದ ಮತ್ತೊಂದು ಪ್ರಯಾಣಿಕ ವಿಮಾನವೊಂದು ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಭಾನುವಾರ ನಡೆದಿದೆ.

ಶಾರ್ಜಾದಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷವಿದೆ ಎಂದು ಪೈಲಟ್ ವರದಿ ಮಾಡಿದ ಹಿನ್ನೆಲೆಯಲ್ಲಿ ವಿಮಾನ ಇಂದು ಪಾಕಿಸ್ತಾನದಲ್ಲು ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. 

ವಿಮಾನವು ಕರಾಚಿಯಲ್ಲಿ ಮುನ್ನೆಚ್ಚರಿಕೆಯಾಗಿ ಲ್ಯಾಂಡಿಂಗ್ ಮಾಡಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಪ್ರಯಾಣಿಕರನ್ನು ಹೈದರಾಬಾದ್‌ಗೆ ಕರೆತರಲು ಕರಾಚಿಗೆ ಹೆಚ್ಚುವರಿ ವಿಮಾನವನ್ನು ಕಳುಹಿಸಲಾಗುವುದು ಎಂದು ಭಾರತೀಯ ವಿಮಾನ ಸಂಸ್ಥೆ ಇಂಡಿಗೋ ಹೇಳಿದೆ.

"ಇಂಡಿಗೋ ವಿಮಾನ 6E-1406 ಶಾರ್ಜಾದಿಂದ ಹೈದರಾಬಾದ್‌ ಟೇಕ್ ಆಫ್ ಆಗಿತ್ತು. ಆದರೆ ಮಾರ್ಗ ಮಧ್ಯೆ ತಾಂತ್ರಿಕದೋಷ ಕಂಡುಬಂದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ಪಾಕಿಸ್ತಾನದ ಕರಾಚಿಗೆ ತಿರುಗಿಸಲಾಯಿತು. ಪೈಲಟ್ ತಾಂತ್ರಿಕ ದೋಷವನ್ನು ಗಮನಿಸಿದ್ದು, ಅಗತ್ಯ ಕಾರ್ಯವಿಧಾನಗಳನ್ನು ಅನುಸರಿಸಲಾಯಿತು ಮತ್ತು ಮುನ್ನೆಚ್ಚರಿಕೆಯಾಗಿ ವಿಮಾನವನ್ನು ಕರಾಚಿಗೆ ತಿರುಗಿಸಲಾಯಿತು. ಹೆಚ್ಚುವರಿ ವಿಮಾನವನ್ನು ಕರಾಚಿಗೆ ಕಳುಹಿಸಲಾಗುತ್ತಿದೆ. ಹೈದರಾಬಾದ್‌ಗೆ ಪ್ರಯಾಣಿಕರು" ಎಂದು ಇಂಡಿಗೋ ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಇಂಜಿನ್ ಅಥವಾ ವಿಮಾನದ ಬಲ ಎಂಜಿನ್‌ನಲ್ಲಿ ಸಿಸ್ಟಮ್ ದೋಷ ಪತ್ತೆಯಾದ ನಂತರ ಇಂಡಿಗೊ ಏರ್‌ಬಸ್ ಮುನ್ನೆಚ್ಚರಿಕೆಯಾಗಿ ಲ್ಯಾಂಡಿಂಗ್ ಮಾಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. 

ಎರಡು ವಾರಗಳಲ್ಲಿ ಕರಾಚಿಯಲ್ಲಿ ಅನಪೇಕ್ಷಿತ ಲ್ಯಾಂಡಿಂಗ್ ಮಾಡಿದ ಎರಡನೇ ಭಾರತೀಯ ವಿಮಾನಯಾನ ಇದಾಗಿದೆ. ಈ ತಿಂಗಳ ಆರಂಭದಲ್ಲಿ ದೆಹಲಿಯಿಂದ ದುಬೈಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವನ್ನು ಕಾಕ್‌ಪಿಟ್‌ನಲ್ಲಿ ಇಂಧನ ಸೂಚಕ ಲೈಟ್ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದ ಕಾರಣ ಪಾಕಿಸ್ತಾನದ ಕರಾಚಿ ನಗರಕ್ಕೆ ತಿರುಗಿಸಲಾಗಿತ್ತು. 138 ಪ್ರಯಾಣಿಕರು ನಂತರ ಭಾರತದಿಂದ ಕಳುಹಿಸಲಾದ ಬದಲಿ ವಿಮಾನದಲ್ಲಿ ದುಬೈಗೆ ತೆರಳಿದ್ದರು. ಪಾಕಿಸ್ತಾನ ಸರ್ಕಾರವು ಪ್ರಯಾಣಿಕರಿಗೆ ಬದಲಿ ವಿಮಾನವನ್ನು ಹತ್ತಲು ಮತ್ತು ದುಬೈಗೆ ಹಾರಲು ಅನುಮತಿಸುವ ಮೊದಲು ಹಲವಾರು ಗಂಟೆಗಳ ಕಾಲ ಸಮಯ ತೆಗೆದುಕೊಂಡಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com