ಪುಲ್ವಾಮಾದಲ್ಲಿ ಉಗ್ರರ ದಾಳಿ: ಸಿಆರ್ ಪಿಎಫ್ ಯೋಧ ಹುತಾತ್ಮ, ಮತ್ತೋರ್ವ ಸಿಬ್ಬಂದಿಗೆ ಗಾಯ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಪುಲ್ವಾಮದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಸಿಆರ್ ಪಿಎಆಫ್ ಯೋಧ ಹುತಾತ್ಮರಾಗಿದ್ದಾರೆ.
Published: 17th July 2022 05:42 PM | Last Updated: 18th July 2022 01:29 PM | A+A A-

ಭದ್ರತಾ ಪಡೆಗಳ ಚಿತ್ರ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಪುಲ್ವಾಮದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಸಿಆರ್ ಪಿಎಆಫ್ ಯೋಧ ಹುತಾತ್ಮರಾಗಿದ್ದಾರೆ.
Terrorists attacked police and CRPF personnel in the Gangoo area of Pulwama today. One CRPF jawan was injured in the attack. The area has been cordoned off: Jammu & Kashmir Police
— ANI (@ANI) July 17, 2022
Details awaited.
ಮೂಲಗಳ ಪ್ರಕಾರ ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ ಪೊಲೀಸರು ಮತ್ತು ಸಿಆರ್‌ಪಿಎಫ್‌ನ ಜಂಟಿ ಚೆಕ್‌ಪೋಸ್ಟ್ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಓರ್ವ ಸಿಆರ್ಪಿಎಫ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
UPDATE | The firing happened at Gangoo Crossing Pulwama on a check post & was done from a nearby Apple orchard. 1 CRPF personnel ASI Vinod Kumar was seriously injured and succumbed to his wounds during treatment. Area was cordoned off. Search in progress: J&K Police
— ANI (@ANI) July 17, 2022
ಪುಲ್ವಾಮಾ ಜಿಲ್ಲೆಯ ಗೊಂಗೂ ಕ್ರಾಸಿಂಗ್ ಬಳಿ ದಾಳಿ ನಡೆದಿದ್ದು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಹಾಯಕ ಸಬ್ ಇನ್ಸ್‌ಪೆಕ್ಟರ್ ಉಗ್ರ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಸಮೀಪದ ಸೇಬಿನ ತೋಟದಿಂದ ಚೆಕ್‌ಪೋಸ್ಟ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದು, ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಭಾರತ- ಚೀನಾ ನಡುವೆ 16ನೇ ಸುತ್ತಿನ ಸೇನಾ ಕಮಾಂಡರ್ ಸಭೆ ಆರಂಭ, ಹಿಂದೆ ಸರಿಯುತ್ತಾ ಡ್ರ್ಯಾಗನ್?
ಗಾಯಗೊಂಡ ಅಧಿಕಾರಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆತ ಹುತಾತ್ಮರಾಗಿದ್ದಾನೆ. ಪ್ರದೇಶವನ್ನು ಸುತ್ತುವರಿದಿದ್ದು, ಉಗ್ರರನ್ನು ಪತ್ತೆ ಹಚ್ಚಲು ಮತ್ತು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಅಂತೆಯೇ ಘಟನಾ ಪ್ರದೇಶದ ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಲಾಗುತ್ತಿದೆ.