ಕೋವಿಡ್-19: ಲಸಿಕೆ ಅಭಿಯಾನದಲ್ಲಿ ದೇಶ ಮತ್ತೊಂದು ಮೈಲುಗಲ್ಲು, 200 ಕೋಟಿ ಗೂ ಅಧಿಕ ಡೋಸ್ ಲಸಿಕೆ ನೀಡಿಕೆ

ಕೋವಿಡ್-19 ಲಸಿಕಾ ಅಭಿಯಾನದಲ್ಲಿ ದೇಶ ಮತ್ತೊಂದು ಮೈಲುಗಲ್ಲು ದಾಟಿದೆ. ದೇಶದಲ್ಲಿ ಇಲ್ಲಿಯವರೆಗೂ 200 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕೋವಿಡ್-19 ಲಸಿಕಾ ಅಭಿಯಾನದಲ್ಲಿ ದೇಶ ಮತ್ತೊಂದು ಮೈಲುಗಲ್ಲು ದಾಟಿದೆ. ದೇಶದಲ್ಲಿ ಇಲ್ಲಿಯವರೆಗೂ 200 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. 

ಆರೋಗ್ಯ ಸಚಿವಾಲಯ ಮಾಹಿತಿ ಪ್ರಕಾರ, ಶೇ.98 ರಷ್ಟು ವಯಸ್ಕರು ಶೇ. 90 ರಷ್ಟು ಒಂದು ಡೋಸ್ ಲಸಿಕೆ ಪಡೆದರೆ, ಶೇ. 90 ರಷ್ಟು ಮಂದಿ ಸಂಪೂರ್ಣ ಲಸಿಕೆ ಪಡೆದುಕೊಂಡಿದ್ದಾರೆ. 15 ರಿಂದ 18 ವರ್ಷದೊಳಗಿನ ಶೇ. 82 ರಷ್ಟು ಮಂದಿ ಮೊದಲ ಡೋಸ್ ಪಡೆದಿದ್ದು, ಶೇ. 68 ರಷ್ಟು ಮಂದಿ ಮೊದಲ ಹಾಗೂ ಎರಡನೇ ಡೋಸ್ ಎರಡನ್ನೂ ಪಡೆದುಕೊಂಡಿದ್ದಾರೆ.

ಕೋವಿಡ್-19 ಲಸಿಕಾ ನೀಡಿಕೆಯಲ್ಲಿ 200 ಕೋಟಿ ಡೋಸ್ ದಾಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಅಭಿನಂದಿಸಿದ್ದಾರೆ.12 ರಿಂದ 14 ವರ್ಷದೊಳಗಿನ ಶೇ. 81 ರಷ್ಟು ಮಂದಿ ಮೊದಲ ಡೋಸ್ ಪಡೆದಿದ್ದರೆ ಇದೇ ಗುಂಪಿನ ಶೇ. 56 ರಷ್ಟು ಮಂದಿ  ಸಂಪೂರ್ಣ ಲಸಿಕೆ ಪಡೆದುಕೊಂಡಿದ್ದಾರೆ. 

ಕಳೆದ ವರ್ಷ ಜನವರಿ 16 ರಿಂದ ಆರೋಗ್ಯ ಕಾರ್ಯಕರ್ತರು ಮೊದಲ ಹಂತದಲ್ಲಿ ಲಸಿಕೆ ಪಡೆಯುವುದರೊಂದಿಗೆ ದೇಶಾದ್ಯಂತ ಲಸಿಕಾ ಅಭಿಯಾನ ಆರಂಭವಾಗಿತ್ತು.  ಕಳೆದ ವರ್ಷ ಫೆಬ್ರವರಿಯಿಂದ ಮುಂಚೂಣಿ ಕಾರ್ಯಕರ್ತರಿಗೆ, ಜನವರಿ 10 ರಿಂದ ಆರೋಗ್ಯ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ನೀಡಿಕೆಯನ್ನು ಆರಂಭಿಸಲಾಗಿತ್ತು. 

ಮಾರ್ಚ್ 16 ರಿಂದ 12-14 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಿಕೆ ಆರಂಭವಾಗಿತ್ತು. ಏಪ್ರಿಲ್ 10 ರಂದು 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ವಯೋಮಾನದವರಿಗೆ ಮುನ್ನೆಚ್ಚರಿಕೆ ಡೋಸ್ ಲಸಿಕೆ ನೀಡುವುದನ್ನು ಪ್ರಾರಂಭಿಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com